ADVERTISEMENT

‘ಹಳೆಯ ಅರ್ಜಿಗಳಿಗೆ ಅನುಮತಿ: ಚಿಂತನೆ’

ಬೇಡಿಕೆಯಷ್ಟು ಮರಳು, ಜಲ್ಲಿಕಲ್ಲು, ಗ್ರಾನೈಟ್ ಪೂರೈಸುವ ಉದ್ದೇಶ

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 19:02 IST
Last Updated 8 ಜುಲೈ 2022, 19:02 IST
ಹಾಲಪ್ಪ ಆಚಾರ್‌
ಹಾಲಪ್ಪ ಆಚಾರ್‌   

ಹಾಸನ: ‘ರಾಜ್ಯದಲ್ಲಿ ಬೇಡಿಕೆಯಷ್ಟು ಮರಳು, ಜಲ್ಲಿಕಲ್ಲು, ಗ್ರಾನೈಟ್ ಪೂರೈಕೆ ಮಾಡುವ ಉದ್ದೇಶದಿಂದ, 2016ಕ್ಕಿಂತ ಮೊದಲು ಅರ್ಜಿ ಸಲ್ಲಿಸಿರುವ 5 ಸಾವಿರಕ್ಕೂ ಹೆಚ್ಚು ಗುತ್ತಿಗೆದಾರರಿಗೆ ಅನುಮತಿ ನೀಡಲು ಚಿಂತನೆ ನಡೆದಿದೆ’ ಎಂದು ಗಣಿ, ಭೂವಿಜ್ಞಾನ ಖಾತೆ ಸಚಿವ ಹಾಲಪ್ಪ ಆಚಾರ್ ಶುಕ್ರವಾರ ತಿಳಿಸಿದರು.

‘ರಾಜ್ಯದಲ್ಲಿ ಬೇಡಿಕೆಯಷ್ಟು ಮರಳು, ಜಲ್ಲಿಕಲ್ಲು ಪೂರೈಸಲಾ ಗುತ್ತಿಲ್ಲ. ಹೀಗಾಗಿ ಹೊರ ರಾಜ್ಯದಿಂದ ಮರಳು ಬರುತ್ತಿದೆ. ಹಿಂದೆ ಸಲ್ಲಿಕೆಯಾಗಿದ್ದ ಅರ್ಜಿದಾರರಿಗೂ ಅನುಮತಿ ನೀಡಿ ಕೊರತೆ ನೀಗಿಸುವ ಯತ್ನ ನಡೆದಿದೆ’ ಎಂದರು.

‘ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗುಗಳಲ್ಲಿ ಗರ್ಭಿಣಿಯರು, ಬಾಣಂತಿಯರಿಗೆ ಮನೆಗಳಿಗೆ ಆಹಾರ ಪೂರೈಸಲಾಗುವುದು’ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆದ ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.