ADVERTISEMENT

ವಿಶ್ವ ಯೋಗ ದಿನಕ್ಕೆ ರಾಜ್ಯದಿಂದ ಹಂಪಿ ಆಯ್ಕೆ

​ಪ್ರಜಾವಾಣಿ ವಾರ್ತೆ
Published 21 ಜೂನ್ 2021, 2:08 IST
Last Updated 21 ಜೂನ್ 2021, 2:08 IST
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಹೊಸಪೇಟೆ ತಾಲ್ಲೂಕಿನ ಹಂಪಿ ಗಜಶಾಲೆ ಎದುರು ಭಾನುವಾರ ಸಿದ್ಧತೆ ಮಾಡಿಕೊಳ್ಳಲಾಯಿತು
ವಿಶ್ವ ಯೋಗ ದಿನಾಚರಣೆ ಪ್ರಯುಕ್ತ ಹೊಸಪೇಟೆ ತಾಲ್ಲೂಕಿನ ಹಂಪಿ ಗಜಶಾಲೆ ಎದುರು ಭಾನುವಾರ ಸಿದ್ಧತೆ ಮಾಡಿಕೊಳ್ಳಲಾಯಿತು   

ಹೊಸಪೇಟೆ (ವಿಜಯನಗರ): ವಿಶ್ವ ಯೋಗ ದಿನಾಚರಣೆ ನಿಮಿತ್ತ ಕೇಂದ್ರ ಸಂಸ್ಕೃತಿ ಸಚಿವಾಲಯವು ದೇಶದ 75 ಪಾರಂಪರಿಕ ಸ್ಥಳಗಳಲ್ಲಿ ಸೋಮವಾರ (ಜೂ.21) ಬೆಳಿಗ್ಗೆ 6ಕ್ಕೆ ಏಕಕಾಲಕ್ಕೆ ಕಾರ್ಯಕ್ರಮ ಆಯೋಜಿಸಿದ್ದು, ರಾಜ್ಯದಿಂದ ಹಂಪಿ ಆಯ್ಕೆಯಾಗಿದೆ.

75 ಸ್ಥಳಗಳ ಪೈಕಿ 35 ಸ್ಥಳಗಳಲ್ಲಿ ನಡೆಯುವ ಕಾರ್ಯಕ್ರಮದ ನೇರಪ್ರಸಾರ ದೂರದರ್ಶನ ವಾಹಿನಿ
ಯಲ್ಲಿ ಆಗಲಿದೆ. ಅದರಲ್ಲಿ ಹಂಪಿ ಕೂಡ ಸೇರಿದೆ. ಈಗಾಗಲೇ ಸಂಸ್ಕೃತಿ ಸಚಿವಾಲಯ ಹಾಗೂ ದೂರದರ್ಶನದ ಸಿಬ್ಬಂದಿ ಹಂಪಿಯಲ್ಲಿ ಬೀಡು ಬಿಟ್ಟಿದ್ದು, ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.

‘20 ಜನ ಅಂತರ ಕಾಯ್ದುಕೊಂಡು ಯೋಗಾಸನ ಮಾಡುವರು. ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮ ವೀಕ್ಷಿಸುವರು’ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆಯ ಡೆಪ್ಯುಟಿ ಸೂಪರಿಂಟೆಂಡೆಂಟ್‌ಪಿ. ಕಾಳಿಮುತ್ತು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.