ADVERTISEMENT

ಸಿಂದಗಿ ಉಪ ಚುನಾವಣೆ ಅಭ್ಯರ್ಥಿ ಕುರಿತು ಜೆಡಿಎಸ್ ಶೀಘ್ರ ತೀರ್ಮಾನ: ಕುಮಾರಸ್ವಾಮಿ

ಹಾನಗಲ್‌ಗೆ ನಯಾಜ್ ಶೇಖ್ ಅಭ್ಯರ್ಥಿ

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2021, 6:00 IST
Last Updated 28 ಸೆಪ್ಟೆಂಬರ್ 2021, 6:00 IST
ಬಿಡದಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ
ಬಿಡದಿಯಲ್ಲಿ ಎಚ್.ಡಿ.ಕುಮಾರಸ್ವಾಮಿ ಪತ್ರಿಕಾಗೋಷ್ಠಿ   

ರಾಮನಗರ: ಅಕ್ಟೋಬರ್ 30ರಂದು ನಡೆಯಲಿರುವ ಸಿಂದಗಿ ಉಪ ಚುನಾವಣೆಗೆ ಶೀಘ್ರದಲ್ಲೇ ಅಭ್ಯರ್ಥಿಯನ್ನು ಘೋಷಿಸಲಾಗುವುದು ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು.

ಬಿಡದಿಯಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಸಿಂದಗಿ ಕ್ಷೇತ್ರದಲ್ಲಿ ನಾಲ್ಕೈದು ಮಂದಿ ಟಿಕೆಟ್ ಆಕಾಂಕ್ಷಿಗಳು‌ ಇದ್ದಾರೆ. ಈ ಬಗ್ಗೆ ಅಲ್ಲಿನ ಕಾರ್ಯಕರ್ತರ ಜೊತೆ ಚರ್ಚಿಸಿದ್ದು, ಶೀಘ್ರ ತೀರ್ಮಾನ ಕೈಗೊಳ್ಳುತ್ತೇವೆ. ಸಾಮೂಹಿಕ ನಾಯಕತ್ವದೊಂದಿಗೆ ಉಪ ಚುನಾವಣೆ ಎದುರಿಸುತ್ತೇವೆ' ಎಂದರು.

ADVERTISEMENT

ಹಾನಗಲ್‌ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ‌ ನಯಾಜ್ ಶೇಖ್ ಅವರನ್ನು ಈಗಾಗಲೇ ಆಯ್ಕೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.