ADVERTISEMENT

ಮೂಟೆ ಹೊರುವವರಿಗೆ ಎಲ್ಲಾದರೂ ಒಂದೇ : ವಸತಿ ಸಚಿವ ಸೋಮಣ್ಣ 

​ಪ್ರಜಾವಾಣಿ ವಾರ್ತೆ
Published 25 ಜನವರಿ 2022, 8:12 IST
Last Updated 25 ಜನವರಿ 2022, 8:12 IST
ವಸತಿ ಸಚಿವ ವಿ ಸೋಮಣ್ಣ
ವಸತಿ ಸಚಿವ ವಿ ಸೋಮಣ್ಣ   

ಬೆಂಗಳೂರು: ‘ನಾನು ಬೆಂಗಳೂರು ಉಸ್ತುವಾರಿ ಕೇಳಿದ್ದೆ. ಅದನ್ನು ಮುಖ್ಯಮಂತ್ರಿ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಅದು ಅವರ ಬಳಿಯೇ ಇರುವುದು ಸೂಕ್ತ’ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಉಸ್ತುವಾರಿ ಹಂಚಿಕೆ ಬಗ್ಗೆ ಯಾವ ಅಸಮಾಧಾನವೂ ಇಲ್ಲ. ರಾಷ್ಟ್ರೀಯ ನಾಯಕರು ಹೇಳಿದಂತೆ ಮುಖ್ಯಮಂತ್ರಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಲ್ಲಿ ಯಾವುದೇ ಅಸಮಾಧಾನ ಇಲ್ಲ’ ಎಂದರು.

‘ವರಿಷ್ಠರು ಏನೋ ಚಿಂತನೆ ಮಾಡಿ ಉಸ್ತುವಾರಿ ಜವಾಬ್ದಾರಿ ನೀಡಿದ್ದಾರೆ. ಮೂಟೆ ಹೊರುವವರಿಗೆ ಎಲ್ಲಾದರೂ ಒಂದೇ. ನಾವೆಲ್ಲ ಹಿರಿಯ ಸಚಿವರಿದ್ದರೂ ಮುಖ್ಯಮಂತ್ರಿ ಬೊಮ್ಮಾಯಿ ನಮ್ಮಷ್ಟೇ ಹಿರಿಯರಿದ್ದಾರೆ, ಬುದ್ದಿವಂತರಿದ್ದಾರೆ’ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.