ADVERTISEMENT

ಪ್ರಚಾರದ ಹುಚ್ಚಿಗೆ ಕಳಪೆ ಧ್ವಜ ಮಾರಾಟ ಮಾಡಿದ ಬಿಜೆಪಿ: ಕಾಂಗ್ರೆಸ್‌ ವಾಗ್ದಾಳಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಆಗಸ್ಟ್ 2022, 9:23 IST
Last Updated 4 ಆಗಸ್ಟ್ 2022, 9:23 IST
ಬಿಜೆಪಿ ಮಾರಾಟ ಮಾಡಿದ ಧ್ವಜ– ಪ್ರಜಾವಾಣಿ ಚಿತ್ರ
ಬಿಜೆಪಿ ಮಾರಾಟ ಮಾಡಿದ ಧ್ವಜ– ಪ್ರಜಾವಾಣಿ ಚಿತ್ರ   

ಬೆಂಗಳೂರು: ಪ್ರಚಾರದ ಹುಚ್ಚಿಗಾಗಿ ಕಳಪೆ ಗುಣಮಟ್ಟದ ಧ್ವಜಗಳನ್ನು ಬಿಜೆಪಿಯು ಮಾರಾಟ ಮಾಡಿದ್ದು ದೇಶಕ್ಕೆ ಎಸಗಿದ ಮಹಾನ್ ದ್ರೋಹ ಎಂದು ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ.

ಈ ವಿಚಾರವಾಗಿ ‘ಡೆಕ್ಕನ್‌ ಹೆರಾಲ್ಡ್‌’ ವರದಿಯನ್ನು ಟ್ವೀಟ್‌ ಮಾಡಿರುವ ಕೆಪಿಸಿಸಿ, ‘ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ತಮ್ಮೊಳಗಿನ ತಿರಂಗಾ ದ್ವೇಷವನ್ನು ತೀರಿಸಿಕೊಳ್ಳಲೆಂದೇ ಧ್ವಜ ಸಂಹಿತೆಯನ್ನು ಬದಲಿಸಿ ರಾಷ್ಟ್ರಧ್ವಜದ ಘನತೆಯನ್ನು ಕುಗ್ಗಿಸುತ್ತಿವೆ’ ಎಂದು ಹರಿಹಾಯ್ದಿದೆ.

‘ಬಿಜೆಪಿಯು ಪ್ರಚಾರದ ಹುಚ್ಚಿಗಾಗಿ ಕಳಪೆ ಹಾಗೂ ಹಾಳಾದ ಧ್ವಜಗಳನ್ನು ಮಾರಾಟ ಮಾಡಿದ್ದು ದೇಶಕ್ಕೆ ಎಸಗಿದ ಮಹಾನ್ ದ್ರೋಹ. ಒಳಗೆ ತಿರಂಗಾ ದ್ವೇಷ, ಹೊರಗೆ ನಾಟಕ ಮಾಡಿದರೆ ಇಂತವೇ ಸಂಭವಿಸುತ್ತವೆ’ ಎಂದು ಟೀಕಿಸಿದೆ.

ADVERTISEMENT

‘ಬಿಜೆಪಿ ಪಕ್ಷದ ನಿಷ್ಠೆ, ಭಕ್ತಿ, ಪ್ರೀತಿ ಭಗವಾಧ್ವಜಕ್ಕೊ, ರಾಷ್ಟ್ರಧ್ವಜಕ್ಕೋ? ಮೊದಲು ಸ್ಪಷ್ಟಪಡಿಸಿ ತಮ್ಮ ನಕಲಿ ನಾಟಕ ಮುಂದುವರೆಸಲಿ. ಬಿಜೆಪಿಗೆ ನಿಜವಾಗಿಯೂ ತಿರಂಗಾಪ್ರೇಮ ಇದ್ದರೆ, ಭಗವಾಧ್ವಜವನ್ನೇ ರಾಷ್ಟ್ರಧ್ವಜವನ್ನಾಗಿ ಬದಲಿಸುತ್ತವೆ ಎಂದ ಶಾಸಕರಾದ ಈಶ್ವರಪ್ಪ, ಹರೀಶ್ ಪೂಂಜಾರ ಮೇಲೆ ಯಾವ ಕ್ರಮ ಕೈಗೊಂಡಿದೆ ಹೇಳಲಿ’ ಎಂದು ಕಾಂಗ್ರೆಸ್‌ ಟ್ವೀಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.