ADVERTISEMENT

ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ | ದೂರು ನೀಡಿದರೆ ತಕ್ಷಣ ಕಾನೂನು ಕ್ರಮ: ಸಿಎಂ

​ಪ್ರಜಾವಾಣಿ ವಾರ್ತೆ
Published 26 ಜನವರಿ 2025, 16:10 IST
Last Updated 26 ಜನವರಿ 2025, 16:10 IST
<div class="paragraphs"><p>ಸಿಎಂ ಸಿದ್ದರಾಮಯ್ಯ</p></div>

ಸಿಎಂ ಸಿದ್ದರಾಮಯ್ಯ

   

ಬೆಂಗಳೂರು: ‘ಖಾಸಗಿ ಹಣಕಾಸು ಸಂಸ್ಥೆಗಳ ಕಿರುಕುಳ ಹೆಚ್ಚುತ್ತಿದ್ದು, ಅಂಥವರ ವಿರುದ್ಧ ಜನರು ದೂರು ನೀಡಿದರೆ ತಕ್ಷಣ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮೈಕ್ರೊ ಫೈನಾನ್ಸ್‌ ಕಂಪನಿಗಳು ಅಥವಾ ಲೇವಾದೇವಿಗಾರರು ನೀಡುವ ತೊಂದರೆಗಳ ವಿರುದ್ಧ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ತೆರೆಯಲಾದ ಸಹಾಯವಾಣಿಗೆ ದೂರು ನೀಡಬಹುದು’ ಎಂದರು.

ADVERTISEMENT

ಕೇಂದ್ರಕ್ಕೆ ಪತ್ರ: ‘ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಪ್ರಧಾನಿ ಮೋದಿ, ಕೇಂದ್ರ ಸಚಿವರಾದ ನಿರ್ಮಾಲಾ ಸೀತಾರಾಮನ್‌ ಮತ್ತು ವಿ. ಸೋಮಣ್ಣ ಅವರಿಗೆ ಈ ಬಗ್ಗೆ ಪತ್ರ ಬರೆದಿದ್ದೇನೆ’ ಎಂದರು.

ದೋಸೆ ತಿಂದ ಸಿಎಂ: ಭಾನುವಾರ ಬೆಳಿಗ್ಗೆ ಶಿವಾನಂದ ವೃತ್ತದಲ್ಲಿರುವ ಜನಾರ್ದನ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ದೋಸೆ ತಿಂದರು. ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು, ನಜೀರ್ ಅಹಮ್ಮದ್, ಮಾಜಿ ಸಚಿವ ಎಚ್.ಎಂ. ರೇವಣ್ಣ ಜೊತೆಗಿದ್ದರು.‌‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.