ಹೈಕೋರ್ಟ್
ಬೆಂಗಳೂರು: ಕುಂಡಲಿ ಪೂಜೆ ನೆಪದಲ್ಲಿ 33 ವರ್ಷದ ಮಹಿಳೆಯೊಬ್ಬರ ಜೊತೆ ಅನುಚಿತವಾಗಿ ವರ್ತಿಸಿ ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದಡಿ ಜ್ಯೋತಿಷಿಯೊಬ್ಬರ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ ಆರೋಪಿಯಾದ ಮದ್ದೂರಿನ ಅನ್ನಪೂರ್ಣೇಶ್ವರಿ ಮಹಾಕಾಳಿ ಜ್ಯೋತಿಷ್ಯಾಲಯದ ಮೋಹನದಾಸ್ ಅಲಿಯಾಸ್ ಶಿವರಾಮು (50) ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.
‘ಆರೋಪಿಯು ಮಹಿಳೆಯ ಮೇಲೆ (ಐಪಿಸಿ ಕಲಂ 354) ಮಾನಭಂಗ ಮಾಡುವ ಉದ್ದೇಶದಿಂದ ವರ್ತಿಸುವ ಮತ್ತು 354 ಎ (ಮಹಿಳೆ ವಿರುದ್ಧದ ಲೈಂಗಿಕ ದೌರ್ಜನ್ಯಕ್ಕೆ ಶಿಕ್ಷೆ) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಹೀಗಾಗಿ, ಪ್ರಕರಣ ರದ್ದುಪಡಿಸುವುದಕ್ಕೆ ಅವಕಾಶವಿಲ್ಲ’ ಎಂದು ನ್ಯಾಯಪೀಠ ಆದೇಶದಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.