‘ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ನಾಯಕತ್ವದಲ್ಲಿ ಬಿ.ವೈ. ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ವಿಜಯೇಂದ್ರ ಅವರ ನಾಯಕತ್ವ ಪ್ರಶ್ನಿಸಿದರೆ, ಅದು ನರೇಂದ್ರ ಮೋದಿಯವರ ನಾಯಕತ್ವವನ್ನೇ ಪ್ರಶ್ನಿಸಿದಂತೆ’ ಎಂದು ಬಿಜೆಪಿ ಮುಖಂಡ ಹರತಾಳು ಹಾಲಪ್ಪ ಹೇಳಿದರು. ಬೆಂಗಳೂರಿನಲ್ಲಿ ಶುಕ್ರವಾರ ಅವರು ಮಾತನಾಡಿದರು. ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಬೇಕು ಎಂದು ಬಿ.ವೈ. ವಿಜಯೇಂದ್ರ ಪರ ಬಣದ 20ಕ್ಕೂ ಹೆಚ್ಚು ನಾಯಕರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.