ADVERTISEMENT

ಪಿಎಸ್‍ಐ ನೇಮಕಾತಿ ಅಕ್ರಮ: ಗ್ರಾಮ ಪಂಚಾಯಿತಿ ಅಧ್ಯಕ್ಷನ ಬಂಧನ

​ಪ್ರಜಾವಾಣಿ ವಾರ್ತೆ
Published 8 ಮೇ 2022, 19:11 IST
Last Updated 8 ಮೇ 2022, 19:11 IST
ಕೇಶವಮೂರ್ತಿ
ಕೇಶವಮೂರ್ತಿ   

ಚನ್ನರಾಯಪಟ್ಟಣ (ಹಾಸನ ಜಿಲ್ಲೆ): ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪದಡಿ ಬೆಕ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೇಶವಮೂರ್ತಿ ಅವರನ್ನು ಸಿಐಡಿ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ.

ಗಾಂಧಿ ವೃತ್ತದ ಬಳಿಯಿರುವ ಮನೆಯಿಂದ ಕೇಶವಮೂರ್ತಿ ಅವರನ್ನು ವಿಚಾರಣೆಗಾಗಿ ಅಧಿಕಾರಿಗಳು ಶನಿವಾರ ಬೆಂಗಳೂರಿಗೆ ಕರೆದೊಯ್ದಿದ್ದರು. ಇದೇ ಪ್ರಕರಣದಲ್ಲಿ ಚನ್ನರಾಯಪಟ್ಟಣದ ಪುರಸಭೆ ಸದಸ್ಯರೊಬ್ಬರು ಭಾಗಿಯಾಗಿರುವ ಶಂಕೆ ಇದ್ದು, ಅವರ ಪತ್ತೆಗೆ ಮುಂದಾಗಿದ್ದಾರೆ.

ಬೆಕ್ಕ ಗ್ರಾಮದ ಚಂದ್ರಶೇಖರ್‌ ಅವರ ಪುತ್ರ ವೆಂಕಟೇಶ್‌ಪಿಎಸ್‌ಐ ಹುದ್ದೆಯ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆಯಾಗಿದ್ದಾರೆ. ಇದಕ್ಕಾಗಿ ಚಂದ್ರಶೇಖರ್‌ ತನ್ನ ಸಂಬಂಧಿ ಕೇಶವಮೂರ್ತಿ ಮೂಲಕ ₹ 40 ಲಕ್ಷ ನೀಡಿದ್ದರು ಎನ್ನಲಾಗಿದೆ. ವೆಂಕಟೇಶ್‌ ಹಾಗೂ ಚಂದ್ರಶೇಖರ್‌ ಅವರನ್ನೂ ಸಿಐಡಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದರು.

ADVERTISEMENT

ವೆಂಕಟೇಶ್‌ ಅರಸೀಕೆರೆ ತಾಲ್ಲೂಕಿನ ಗ್ರಾಮ ಪಂಚಾಯಿತಿಯೊಂದರಲ್ಲಿ ನರೇಗಾ ಯೋಜನೆಯಡಿ ಕಿರಿಯ ಎಂಜಿನಿಯರ್‌ ಆಗಿ ಹೊರಗುತ್ತಿಗೆ ಆಧಾರದಡಿ ಕೆಲಸ ಮಾಡುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.