ADVERTISEMENT

ನೇರವಾಗಿ ಜೈಲಿಗೆ ಕಳುಹಿಸುವ ಮಸೂದೆ: ದ್ವೇಷ ಭಾಷಣ ತಡೆ ಮಸೂದೆಗೆ ಬಿಜೆಪಿ ವಿರೋಧ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 14:25 IST
Last Updated 18 ಡಿಸೆಂಬರ್ 2025, 14:25 IST

‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ– 2025’ಗೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು. ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಮಾತನಾಡಿ, ‘ಈ ಮಸೂದೆ ಅಭಿವ್ಯಕ್ತಿ ಸ್ವಾತಂತ್ರ್ಯದ ಉಲ್ಲಂಘನೆ. ಪತ್ರಿಕಾ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಿದೆ. ಭ್ರಷ್ಟಾಚಾರದ ಸುದ್ದಿ ಪ್ರಸಾರ ಮಾಡಿದರೆ, ಜೈಲು ಸೇರಬೇಕಾಗುತ್ತದೆ. ವ್ಯಕ್ತಿ ಹೇಳಿಕೆ ನೀಡಿದರೆ, ಸಂಸ್ಥೆ ಮೇಲೆ ಕೇಸ್. ಯಾವ ಉದ್ದೇಶಕ್ಕೆ ಈ ಮಸೂದೆ ತರುತ್ತಿದ್ದೀರಿ? ಪೊಲೀಸ್‌ ಇಲಾಖೆ ಮತ್ತಷ್ಟು ಭ್ರಷ್ಟಾಚಾರ, ದುಡ್ಡು ವಸೂಲಿ ಮಾಡಲು ಅವಕಾಶ ನೀಡುತ್ತಿದ್ದೀರಾ? ಈ ಬಿಲ್‌ ನೇರವಾಗಿ ಜೈಲು ಎನ್ನುತ್ತಿದೆ. ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದವರಿಂದ ಮತ್ತೇನು ನಿರೀಕ್ಷೆ ಮಾಡಲು ಸಾಧ್ಯ?’ ಎಂದು ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.