
ರಾಜ್ಯಪಾಲ ಥಾವರಚಂದ್ ಗೆಹಲೋತ್–
ಪ್ರಜಾವಾಣಿ ಚಿತ್ರ
ಬೆಂಗಳೂರು: ದ್ವೇಷ ಭಾಷಣ ಹಾಗೂ ದ್ವೇಷಾಪರಾಧಗಳನ್ನು ತಡೆಯಲು ರಾಜ್ಯ ಸರ್ಕಾರ ತಂದಿರುವ ಮಸೂದೆಯ ಪರವಾಗಿ ಕಾಂಗ್ರೆಸ್, ವಿರೋಧವಾಗಿ ಬಿಜೆಪಿಯು, ರಾಜ್ಯಪಾಲರ ಮೊರೆ ಹೋಗಲು ಅಣಿಯಾಗಿವೆ.
ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಈ ಮಸೂದೆ ಮಂಡಿಸಿದ್ದ ರಾಜ್ಯ ಸರ್ಕಾರ, ಬಿಜೆಪಿ, ಜೆಡಿಎಸ್ ವಿರೋಧದ ಮಧ್ಯೆಯೇ ಅನುಮೋದನೆ ಪಡೆದಿತ್ತು.
ಮಸೂದೆಯನ್ನು ಅಂಗೀಕರಿಸುವಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಕೋರಿ, ಲೋಕಭವನಕ್ಕೆ ಕಳುಹಿಸಲಾಗಿತ್ತು. ಈ ಮಸೂದೆಯು ರಾಜ್ಯಪಾಲರ ಪರಿಶೀಲನೆಯಲ್ಲಿದೆ ಎಂದು ಗೊತ್ತಾಗಿದೆ.
ಏತನ್ಮಧ್ಯೆ, ಮಸೂದೆಯ ಪರ–ವಿರೋಧದ ಚಟುವಟಿಕೆ ಶುರುವಾಗಿದೆ.
ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ‘ರಾಜ್ಯಪಾಲರನ್ನು ಭೇಟಿ ಮಾಡಿ ಈ ಬಗ್ಗೆ ವಿವರಣೆ ನೀಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.