ADVERTISEMENT

ದ್ವೇಷ ಭಾಷಣ ತಡೆ ಮಸೂದೆಗೆ ಅಂಗೀಕಾರ: ಯೂಟ್ಯೂಬರ್‌ಗಳೂ ಕಾಯ್ದೆ ವ್ಯಾಪ್ತಿಗೆ

​ಪ್ರಜಾವಾಣಿ ವಾರ್ತೆ
Published 18 ಡಿಸೆಂಬರ್ 2025, 14:25 IST
Last Updated 18 ಡಿಸೆಂಬರ್ 2025, 14:25 IST

ವಿರೋಧ ಪಕ್ಷ ಬಿಜೆಪಿ ಸದಸ್ಯರ ತೀವ್ರ ವಿರೋಧ, ಗದ್ದಲ, ಕೋಲಾಹಲದ ನಡುವೆಯೇ ತರಾತುರಿಯಲ್ಲಿ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ಮಸೂದೆ– 2025’ಗೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು. ಮಸೂದೆ ಮಂಡಿಸಿದ ಗೃಹ ಸಚಿವ ಜಿ. ಪರಮೇಶ್ವರ, ‘ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರ ಮಾಡುವುದರಿಂದ ಸಮಾಜದ ಸಾಮರಸ್ಯ ಹದಗೆಡಿಸುವುದು ಮತ್ತು ದ್ವೇಷ ಹರಡಿಸುವಿಕೆಗೆ ಕಡಿವಾಣ ಹಾಕಲು ಮತ್ತು ಅಂತಹ ಅಪರಾಧಗಳನ್ನು ಎಸಗುವ ವ್ಯಕ್ತಿ, ವ್ಯಕ್ತಿಗಳು, ಸಂಘಟನೆಯವರನ್ನು ಶಿಕ್ಷೆಗೆ ಒಳಪಡಿಸುವ ಉದ್ದೇಶದಿಂದ ಈ ಮಸೂದೆಯನ್ನು ರೂಪಿಸಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.