ADVERTISEMENT

‘ಒಳ್ಳೆಯ ಉದ್ದೇಶದಿಂದ ಬಳ್ಳಾರಿ ವಿಭಜನೆ’

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2019, 19:34 IST
Last Updated 29 ಸೆಪ್ಟೆಂಬರ್ 2019, 19:34 IST
ಡಾ.ಸಿ.ಎನ್.ಅಶ್ವತ್ಥನಾರಾಯಣ್
ಡಾ.ಸಿ.ಎನ್.ಅಶ್ವತ್ಥನಾರಾಯಣ್   

ಚಿಕ್ಕಬಳ್ಳಾಪುರ: ಒಳ್ಳೆಯ ಉದ್ದೇಶದಿಂದಲೇ ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರೂಪಿಸಲಾಗುತ್ತದೆ. ಈ ವಿಭಜನೆ ಅಲ್ಲಿನ ಜನರ ಬಹುದಿನಗಳ ಬೇಡಿಕೆಯೂ ಆಗಿದೆ. ಇದನ್ನು ಯಾರೂ ವಿರೋಧಿಸಬಾರದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದರು.

ತಾಲ್ಲೂಕಿನ ಮುದ್ದೇನಹಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯನಗರ ಜಿಲ್ಲೆ ರಚನೆ ವಿಚಾರದಲ್ಲಿ ಒಮ್ಮತ ಅಗತ್ಯ. ಆದರೆ ಈ ಬಗ್ಗೆ ಅನಪೇಕ್ಷಿತ ಮಾತುಗಳು ಕೇಳಿ ಬರುತ್ತಿವೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ಬಗ್ಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದು ತಿಳಿಸಿದರು.

‘ಸೋಮವಾರ (ಸೆ.30) ಸಂಜೆ ಒಳಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಅನರ್ಹ ಶಾಸಕರು ಈಗಲೇ ಬಿಜೆಪಿಗೆ ಬಂದರೆ ನಾವು ಸ್ವಾಗತಿಸಲು ಸಿದ್ಧರಿದ್ದೇವೆ. ಉಪ ಚುನಾವಣೆಯಲ್ಲಿ ಅನರ್ಹ ಶಾಸಕರ ದಾರಿ ಅವರಿಗೆ, ನಮ್ಮ ದಾರಿ ನಮಗೆ ಎಂದಿರುವ ಶಾಸಕ ಉಮೇಶ್ ಕತ್ತಿ ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.