ADVERTISEMENT

ಅವಿಶ್ವಾಸ ನಿರ್ಣಯ: ವಿಮಾನದಲ್ಲಿ ಬಂದ ಗ್ರಾ.ಪಂ ಸದಸ್ಯರು

ಗ್ರಾಮ ಪಂಚಾಯಿತಿಗೂ ಕಾಲಿಟ್ಟ ರೆಸಾರ್ಟ್‌ ರಾಜಕಾರಣ: 40 ದಿನ ಬೆಂಗಳೂರಿನ ರೆಸಾರ್ಟ್‌ನಲ್ಲಿದ್ದ ಸದಸ್ಯರು

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2022, 21:31 IST
Last Updated 6 ಡಿಸೆಂಬರ್ 2022, 21:31 IST
ಬೆಂಗಳೂರಿನ ರೆಸಾರ್ಟ್‌ನಲ್ಲಿ ತಂಗಿದ್ದ ದೇವರಗುಡ್ಡ ಗ್ರಾಮ ಪಂಚಾಯಿತಿ ಸದಸ್ಯರು ಮಂಗಳವಾರ ವಿಮಾನದಲ್ಲಿ ಹುಬ್ಬಳ್ಳಿಗೆ ಬಂದರು
ಬೆಂಗಳೂರಿನ ರೆಸಾರ್ಟ್‌ನಲ್ಲಿ ತಂಗಿದ್ದ ದೇವರಗುಡ್ಡ ಗ್ರಾಮ ಪಂಚಾಯಿತಿ ಸದಸ್ಯರು ಮಂಗಳವಾರ ವಿಮಾನದಲ್ಲಿ ಹುಬ್ಬಳ್ಳಿಗೆ ಬಂದರು   

ರಾಣೆಬೆನ್ನೂರು (ಹಾವೇರಿ): ಬೆಂಗಳೂರಿನ ರೆಸಾರ್ಟ್‌ನಲ್ಲಿ 40 ದಿನ ತಂಗಿದ್ದ ತಾಲ್ಲೂಕಿನ ದೇವರಗುಡ್ಡ ಗ್ರಾಮ ಪಂಚಾಯಿತಿಯ 9 ಸದಸ್ಯರು ವಿಮಾನದಲ್ಲಿ ಹುಬ್ಬಳ್ಳಿಗೆ ಬಂದಿದ್ದು, ಮಂಗಳವಾರ ಅವಿಶ್ವಾಸ ನಿರ್ಣಯ ಮಂಡನೆಯಲ್ಲಿ ಪಾಲ್ಗೊಂಡರು.

ಗ್ರಾಮ ಪಂಚಾಯಿತಿ ಸದಸ್ಯ ಬಲ 13 ಆಗಿದ್ದು, ಅಧಿಕಾರಕ್ಕಾಗಿ ಎರಡು ಗುಂಪುಗಳ ನಡುವೆ ಜಟಾಪಟಿ ನಡೆದಿತ್ತು. ಗ್ರಾ.ಪಂ. ಅಧ್ಯಕ್ಷ ಮಾಲತೇಶ ನಾಯರ್‌ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಯಾಗಿದ್ದು,ಹೊಸ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಾಕಿ ಉಳಿದಂತಾಗಿದೆ.

‘ಮಾಲತೇಶ ನಾಯರ್‌ 15 ತಿಂಗಳ ನಂತರ ಸದಸ್ಯ ಸುರೇಶ ತಳಗೇರಿ ಅವರಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡುವ ಒಪ್ಪಂದವಾಗಿತ್ತು. ಆದರೆ, ಅವರು ಬಿಟ್ಟುಕೊಡಲಿಲ್ಲ. ಅವಿಶ್ವಾಸ ಮಂಡನೆ ವೇಳೆ ಸದಸ್ಯರನ್ನು ಸೆಳೆಯಬಹುದು ಎಂದು ಸದಸ್ಯರನ್ನು ಬೆಂಗಳೂರಿಗೆ ಕಳುಹಿಸಲಾಗಿತ್ತು’ ಎಂದು ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಪ್ರಭಾವವುಳ್ಳ ಮಾಲತೇಶ ಸ್ವಾಮಿ ದೇವಸ್ಥಾನದ ಪ್ರಧಾನ ಅರ್ಚಕ ಸಂತೋಷ ಭಟ್‌ ಗುರೂಜಿ ‘ಪ್ರಜಾವಾಣಿ’ಗೆ ತಿಳಿಸಿದರು.ಉಪವಿಭಾಗಾಧಿಕಾರಿ ಶಿವಾನಂದ ಉಳ್ಳಾಗಡ್ಡಿ ಅವಿಶ್ವಾಸ ಪ್ರಕ್ರಿಯೆ ನಡೆಸಿಕೊಟ್ಟರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.