ADVERTISEMENT

ಹವಾಲಾ ಶಂಕೆ: ₹ 1 ಕೋಟಿ ಹಣ ಪೊಲೀಸರ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 17 ಮೇ 2019, 7:38 IST
Last Updated 17 ಮೇ 2019, 7:38 IST
   

ಮಂಗಳೂರು: ನಗರದ ರಥ ಬೀದಿಯಲ್ಲಿ ಶುಕ್ರವಾರ ಬೆಳಿಗ್ಗೆ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿರುವ ಪೊಲೀಸರು, ₹ 1 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರ ನಿವಾಸಿ ಮಂಜುನಾಥ್ (56) ಹಣದೊಂದಿಗೆ ಸೆರೆಸಿಕ್ಕ ವ್ಯಕ್ತಿ. ಶುಕ್ರವಾರ ಬೆಳಿಗ್ಗೆ ಮಂಗಳೂರು ಉತ್ತರ ಠಾಣೆಯ ಪೊಲೀಸರು ಗಸ್ತು ತಿರುಗುತ್ತಿದ್ದರು. ಆಗ ಮಂಜುನಾಥ್ ರಥಬೀದಿಯಲ್ಲಿ ಹಣದೊಂದಿಗೆ ಓಡಾಡುತ್ತಿದ್ದ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದರು.

'ಹಣದ ಮೂಲ ಕುರಿತು ಮಂಜುನಾಥ್ ಯಾವುದೇ ಮಾಹಿತಿ ನೀಡುತ್ತಿಲ್ಲ. ಹಣಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳೂ ಆತನ ಬಳಿ ಇಲ್ಲ. ಹವಾಲಾ ವಹಿವಾಟು ನಡೆಸುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಪ್ರಕರಣ ದಾಖಲಿಸಿ, ಆರೋಪಿಯನ್ನು ಬಂಧಿಸಲಾಗಿದೆ. ನಗದನ್ನು ವಶಪಡಿಸಿಕೊಂಡಿದ್ದು, ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಲಾಗುವುದು' ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.