
ಪ್ರಜಾವಾಣಿ ವಾರ್ತೆ
ಮೈಸೂರು: ‘ಡಾ. ಎಚ್.ಸಿ. ಮಹದೇವಪ್ಪ ನನ್ನ ಆತ್ಮೀಯ ಸ್ನೇಹಿತ, ಅವರು ರಾಜ್ಯದ ಮುಖ್ಯಮಂತ್ರಿ ಆದರೆ ಸಂತೋಷ’ ಎಂದು ರೇಷ್ಮೆ ಮತ್ತು ಪಶುಸಂಗೋಪನೆ ಸಚಿವ ಕೆ. ವೆಂಕಟೇಶ್ ಹೇಳಿದರು.
ಸೋಮವಾರ ಇಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ‘ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ. ಖಾಲಿ ಆದ ಮೇಲೆ ದಲಿತ, ಲಿಂಗಾಯತ, ಒಕ್ಕಲಿಗ, ಕುರುಬ.. ಹೀಗೆ ಯಾವುದಾದರೂ ಸಮುದಾಯದ ಒಬ್ಬರು ಮುಖ್ಯಮಂತ್ರಿ ಆಗುತ್ತಾರೆ’ ಎಂದರು.
‘ಬಂಡೀಪುರ–ನಾಗರಹೊಳೆ ಸಫಾರಿಯನ್ನು ರಾಜ್ಯ ಸರ್ಕಾರ ಏಕಾಏಕಿ ಪುನರಾರಂಭ ಮಾಡಿಲ್ಲ. ತಜ್ಞರ ಸಮಿತಿ ಮಾಡಿ, ಚರ್ಚಿಸಿಯೇ ತೀರ್ಮಾನ ತೆಗೆದುಕೊಂಡಿದೆ. ರೈತರು ಪ್ರತಿಭಟನೆಗೆ ಮುಂದಾದರೆ ಏನನ್ನು ಹೇಳಲಾಗದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.