ಧಾರವಾಡ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಗೋಕಾಕ ಜೆಎಂಎಫ್ಸಿ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಮತ್ತು ವಿಚಾರಣಾ ಪ್ರಕ್ರಿಯೆಗೆ ಇಲ್ಲಿನ ಹೈಕೋರ್ಟ್ ಪೀಠ ಗುರುವಾರ ಮಧ್ಯಂತರ ತಡೆ ನೀಡಿದೆ.
ಕಳೆದ ನವೆಂಬರ್ನಲ್ಲಿ ನಡೆದ ಉಪಚುನಾವಣೆ ಸಂದರ್ಭದಲ್ಲಿ ಗೋಕಾಕ ವಿಧಾನಸಭಾ ಕ್ಷೇತ್ರದಲ್ಲಿ ಒಂದು ಸಮುದಾಯವನ್ನು ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ್ದು, ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಎಂದು ಯಡಿಯೂರಪ್ಪ ಅವರ ವಿರುದ್ಧ 2019ರ ನವೆಂಬರ್ 26 ರಂದು ದೂರು ದಾಖಲಾಗಿತ್ತು.
ದೂರು ಸ್ವೀಕರಿಸಿದ್ದ ಪ್ರಧಾನ ಜೆಎಂಎಫ್ಸಿ ನ್ಯಾಯಾಲಯ ಕಳೆದ ಜೂನ್ 26 ರಂದು ವಿಚಾರಣೆ ನಡೆಸುವಂತೆ ಆದೇಶಿಸಿ, ಸಮನ್ಸ್ ಜಾರಿಗೊಳಿಸಿತ್ತು. ದೂರಿನ ಅನ್ವಯ ದಾಖಲಾಗಿದ್ದ ಎಫ್ಐಆರ್ ಮತ್ತು ವಿಚಾರಣಾ ಪ್ರಕ್ರಿಯೆಯನ್ನು ಅನೂರ್ಜಿತಗೊಳಿಸುವಂತೆ ಕೋರಿ ಹೈಕೋರ್ಟ್ನಲ್ಲಿ ಯಡಿಯೂರಪ್ಪ ಅವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠ, ಉಭಯ ಪಕ್ಷಗಳ ವಾದ ಆಲಿಸಿ, ತೀರ್ಪು ಕಾಯ್ದಿರಿಸಿತು.
ಅರ್ಜಿದಾರರ ಪರ ಹಿರಿಯ ವಕೀಲ ಸಿ.ವಿ.ನಾಗೇಶ ಮತ್ತು ಸಂದೀಪ ಪಾಟೀಲ ವಾದ ಮಂಡಿಸಿದ್ದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.