ADVERTISEMENT

ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದ ಎಚ್‌.ಡಿ.ದೇವೇಗೌಡ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2025, 16:15 IST
Last Updated 13 ಅಕ್ಟೋಬರ್ 2025, 16:15 IST
ಎಚ್‌.ಡಿ.ದೇವೇಗೌಡ
ಎಚ್‌.ಡಿ.ದೇವೇಗೌಡ   

ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುಣಮುಖರಾಗಿದ್ದು, ಮನೆಗೆ ಸೋಮವಾರ ಮರಳಿದರು.

‘ಸೂಕ್ತ ಚಿಕಿತ್ಸೆಯಿಂದ, ದೇವರ ಮತ್ತು ಜನರ ಆಶೀರ್ವಾದದಿಂದ ದೇವೇಗೌಡರು ಗುಣಮುಖರಾಗಿದ್ದಾರೆ. ಹದಿನೈದು ದಿನ ಸಂಪೂರ್ಣ ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಸಹಕರಿಸಬೇಕು’ ಎಂದು ಅವರ ಪುತ್ರ, ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪದ್ಮನಾಭನಗರದಲ್ಲಿರುವ ದೇವೇಗೌಡರ ಮನೆಗೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಶಾಸಕರಾದ ಮುನಿರತ್ನ, ಸತೀಶ ರೆಡ್ಡಿ, ಸಿ.ಟಿ. ರವಿ ಅವರು ಆರೋಗ್ಯ ವಿಚಾರಿಸಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.