ಎಚ್.ಡಿ.ದೇವೇಗೌಡ
(ಸಂಗ್ರಹ ಚಿತ್ರ)
ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರನ್ನು ಅನಾರೋಗ್ಯದ ಕಾರಣ, ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಳಿ ಜ್ವರ ಮತ್ತು ಮೂತ್ರದ ಸೋಂಕಿನ ಕಾರಣ ಸೋಮವಾರ ಸಂಜೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿದ್ದು, ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಅವರ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಇನ್ನೂ ಒಂದು ದಿನ ತೀವ್ರ ನಿಗಾ ಘಟಕದಲ್ಲಿ ಇರಿಸಬೇಕಾಗಬಹುದು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.