ADVERTISEMENT

ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಿದ್ದೇನೆ: ದೇವೇಗೌಡ ಕಣ್ಣೀರು

​ಪ್ರಜಾವಾಣಿ ವಾರ್ತೆ
Published 28 ಜುಲೈ 2019, 9:58 IST
Last Updated 28 ಜುಲೈ 2019, 9:58 IST
ದೇವೇಗೌಡ (ಸಂಗ್ರಹ ಚಿತ್ರ)
ದೇವೇಗೌಡ (ಸಂಗ್ರಹ ಚಿತ್ರ)   

ಬೆಂಗಳೂರು: ‘ನಿಷ್ಠಾವಂತ ಕಾರ್ಯಕರ್ತರನ್ನು ನಾನು ಕಡೆಗಣಿಸಿದ್ದೇನೆ. ಅವರಿಗೆ ಸ್ಥಾನಮಾನ ನೀಡುವುದು ಸಾಧ್ಯವಾಗಲಿಲ್ಲ’ ಎಂದು ಹೇಳಿದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಕಣ್ಣೀರು ಹಾಕಿದರು.

ಪಕ್ಷದ ಕಚೇರಿಯಲ್ಲಿ ಭಾನುವಾರ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಹಂಚುವಲ್ಲಿ ತಪ್ಪಾಗಿದೆ. ಇನ್ನು ಮುಂದೆ ಇಂತಹ ಪ್ರಮಾದಕ್ಕೆ ಅವಕಾಶ ನೀಡುವುದಿಲ್ಲ. ಕಾರ್ಯಕರ್ತರು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT