ADVERTISEMENT

ದೇವೇಗೌಡರ ಕುಟುಂಬ ರಾಜಕಾರಣ ಕೊನೆ: ಸೋಮಶೇಖರ್

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2019, 7:16 IST
Last Updated 8 ಏಪ್ರಿಲ್ 2019, 7:16 IST
ಬಿ. ಸೋಮಶೇಖರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು
ಬಿ. ಸೋಮಶೇಖರ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು   

ತುಮಕೂರು: ಜೆಡಿಎಸ್ ವರಿಷ್ಠ ಎಚ್‌.ಡಿ‌ದೇವೇಗೌಡರ ಕುಟುಂಬ ರಾಜಕಾರಣಕ್ಕೆ ಕೊನೆಗಾಲ ಬಂದಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಸೋಮಶೇಖರ್ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ' ದೇವೇಗೌಡರಜಾತಿ ರಾಜಕಾರಣ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಕೆಟ್ಟ ಬೇರು ಕಿತ್ತು ಹಾಕಬೇಕು' ಎಂದು ಹೇಳಿದರು.

ದೇಶದಲ್ಲಿ ನೆಹರೂ ಕುಟುಂಬವೂ ರಾಜಕಾರಣ ಮಾಡಿದೆ. ನೆಹರೂ ಬಳಿಕ ಇಂದಿರಾ ಗಾಂಧಿ, ಬಳಿಕ ರಾಜೀವ್ ಗಾಂಧಿ, ನಂತರ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಂದಿದ್ದಾರೆ. ಆದರೆ, 87 ವರ್ಷದ ದೇವೇಗೌಡರು, ಅವರ ಮೊಮ್ಮಕ್ಕಳು ಸ್ಪರ್ಧಿಸಿದ್ದಾರೆ. ಸೊಸೆ ಶಾಸಕಿ, ಮಗ ಮುಖ್ಯಮಂತ್ರಿ, ಇನ್ನೊಬ್ಬ ಸಚಿವ. ಇಂತಹ ಕುಟುಂಬ ರಾಜಕಾರಣ ದೇಶದಲ್ಲೇ ಕಂಡಿಲ್ಲ. ಒಕ್ಕಲಿಗ ಸಮುದಾಯದ, ದಲಿತ ನಾಯಕರನ್ನು ರಾಜಕೀಯವಾಗಿ ಮುಗಿಸಿದ ಹೆಗ್ಗಳಿಕೆ ದೇವೇಗೌಡರಿಗೆ ಸಲ್ಲುತ್ತದೆ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.