ADVERTISEMENT

ಡಿ.ಕೆ.ಶಿವಕುಮಾರ್ ನಪುಂಸಕ: ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಶಿವಕುಮಾರ್ ವಿರುದ್ಧ ವಾಗ್ದಾಳಿ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2024, 16:05 IST
Last Updated 9 ಆಗಸ್ಟ್ 2024, 16:05 IST
ಎಚ್.ಡಿ.ಕುಮಾರಸ್ವಾಮಿ
ಎಚ್.ಡಿ.ಕುಮಾರಸ್ವಾಮಿ   

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಭಾರಿ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಿವಕುಮಾರ್ ಅವರನ್ನು ನಪುಂಸಕ ಎಂದು ಕರೆದರು.

ಶುಕ್ರವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಶಿವಕುಮಾರ್‌ಗೆ ವ್ಯಕ್ತಿತ್ವ ಎಂಬುದಿದೆಯಾ?  ಆತನದ್ದು ಒಂದು ನಾಲಿಗೆನಾ.. ಆತ ಮನುಷ್ಯನಾ?’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಧೈರ್ಯವಿದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ನಪುಂಸಕನ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನಿಸುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂಬುದನ್ನು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು ಹಾಗೂ ಕೆಟ್ಟದು ಏನು ಎನ್ನುವುದು ಅವರಿಗೆ ಗೊತ್ತಿದೆ’ ಎಂದೂ ಹೇಳಿದರು. 

ADVERTISEMENT

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್..ಹುಷಾರು!’ ಎಂದು ಕುಮಾರಸ್ವಾಮಿ ಎಚ್ಚರಿಕೆ ಕೊಟ್ಟರು.

‘ನಾನು ಮುಖ್ಯಮಂತ್ರಿಯಾಗಿದ್ದಾಗ ಒಂದು ಅಕ್ರಮ ನಡೆದಿದ್ದರೆ ದಾಖಲೆ ನೀಡಲಿ. ಇವರೇನಾದರೂ ದಾಖಲೆ ನೀಡಿದ್ದರಾ? ವಿರೋಧ ಪಕ್ಷದ ನಾಯಕನಿದ್ದಾಗ ಬಿಜೆಪಿ ವಿರುದ್ಧವೂ ಹೋರಾಟ ಮಾಡಿದ್ದೆ. ಈಗ ಏನೋ ಹೊಸದು ಅಂತ ಬಂದಿದ್ದಾರೆ. ನನ್ನ ಮೇಲೆ ಏನು ಆಪಾದನೆ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.