ADVERTISEMENT

ಎಚ್‌ಡಿಕೆಗೆ ಶುಭಾಶಯ ಕೋರಿದ ರಾಷ್ಟ್ರಪತಿ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2018, 19:55 IST
Last Updated 16 ಡಿಸೆಂಬರ್ 2018, 19:55 IST
ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ 60 ನೇ ಜನ್ಮದಿನದಂದು ಪುತ್ರ ನಿಖಿಲ್‌ ಸಿಹಿ ತಿನ್ನಿಸಿದರು. ಪತ್ನಿ ಅನಿತಾ ಕುಮಾರಸ್ವಾಮಿ ಇದ್ದರು.
ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ 60 ನೇ ಜನ್ಮದಿನದಂದು ಪುತ್ರ ನಿಖಿಲ್‌ ಸಿಹಿ ತಿನ್ನಿಸಿದರು. ಪತ್ನಿ ಅನಿತಾ ಕುಮಾರಸ್ವಾಮಿ ಇದ್ದರು.   

ಬೆಂಗಳೂರು: ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಜನ್ಮದಿನಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರು ಭಾನುವಾರ ದೂರವಾಣಿ ಕರೆ ಮಾಡಿ ಶುಭಾಶಯ ಕೋರಿದರು.

ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಸೇರಿ ಸಚಿವ ಸಂಪುಟದ ಬಹುತೇಕ ಸಹೋದ್ಯೋಗಿಗಳು ಮುಖ್ಯಮಂತ್ರಿಗೆ ಶುಭಾಶಯ ತಿಳಿಸಿದರು.

ಮುಖ್ಯಮಂತ್ರಿ ತಮ್ಮ ಜನ್ಮದಿನವನ್ನು ಪತ್ನಿ ಅನಿತಾ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್‌ ಜತೆಗೆಸರಳವಾಗಿ ಆಚರಿಸಿಕೊಂಡರು. ಡಿ.17ರಂದು ರಾಜಸ್ಥಾನ ಮತ್ತು ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲೂ ಕುಮಾರಸ್ವಾಮಿ ಭಾಗವಹಿಸುವರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.