ADVERTISEMENT

ಕುಮಾರಸ್ವಾಮಿ ಹುಟ್ಟುಹಬ್ಬ; ಶುಭ ಹಾರೈಸಿದ ಎಚ್‌.ಡಿ. ದೇವೇಗೌಡ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಡಿಸೆಂಬರ್ 2023, 9:13 IST
Last Updated 16 ಡಿಸೆಂಬರ್ 2023, 9:13 IST
<div class="paragraphs"><p>ಎಚ್‌.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ</p></div>

ಎಚ್‌.ಡಿ. ದೇವೇಗೌಡ ಹಾಗೂ ಎಚ್.ಡಿ. ಕುಮಾರಸ್ವಾಮಿ

   

(ಸಂಗ್ರಹ ಚಿತ್ರ)

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ತಂದೆ ಎಚ್‌.ಡಿ. ದೇವೇಗೌಡ ಶುಭ ಹಾರೈಸಿದ್ದಾರೆ.

ADVERTISEMENT

ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ದೇವೇಗೌಡ, ಸುದೀರ್ಘ ಅವಧಿ ಜನಸೇವೆ ಮಾಡುವ ಅವಕಾಶ ಭಗವಂತ ಕರುಣಿಸಲಿ ಎಂದು ಹಾರೈಸಿದ್ದಾರೆ.

'ನನ್ನ ಪುತ್ರ, ಮಾಜಿ ಮುಖ್ಯಮಂತ್ರಿಗಳು ಹಾಗೂ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಪಕ್ಷದ ರಾಜ್ಯಾಧ್ಯಕ್ಷರಾದ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ನಿಮಗೆ ಉತ್ತಮ ಆರೋಗ್ಯ, ಆಯುಷ್ಯ ಕರುಣಿಸಿ ಸುದೀರ್ಘ ಅವಧಿ ಜನಸೇವೆ ಮಾಡುವ ಅವಕಾಶವನ್ನು ನೀಡಲಿ ಎಂದು ಹಾರೈಸುತ್ತೇನೆ. ಶುಭವಾಗಲಿ' ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜಕೀಯ ವಲಯದ ಗಣ್ಯರು ಹಾಗೂ ಅಭಿಮಾನಿಗಳು ಕುಮಾರಸ್ವಾಮಿ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.