ಮದ್ದೂರು (ಮಂಡ್ಯ): ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಆದ್ದರಿಂದ ಕೆಲ ಜಿಲ್ಲೆಗಳಲ್ಲಿ ಬಿಜೆಪಿ ಸಂಘಟನೆ ಮಾಡಲು ಸಮಸ್ಯೆಯಾಗುತ್ತಿದೆ’ ಎಂದು ಸಚಿವ ಸಿ.ಪಿ.ಯೋಗೇಶ್ವರ್ ಮಂಗಳವಾರ ಇಲ್ಲಿ ಆರೋಪಿಸಿದರು.
ಬಿಜೆಪಿ ತಾಲ್ಲೂಕು ಘಟಕದ ಸಭೆಯಲ್ಲಿ ಅವರು, ‘ರಾಮನಗರ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಯಡಿಯೂರಪ್ಪ ಅವರು ಕುಮಾರಸ್ವಾಮಿ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದು, ಪಕ್ಷ ಸಂಘಟನೆ ಸಾಧ್ಯವಾಗುತ್ತಿಲ್ಲ. ಇದರಿಂದ ನನಗೂ ಸೇರಿದಂತೆ ಅನೇಕರಿಗೆ ಮುಜುಗರವಾಗುತ್ತಿದೆ. ಮುಂದೆಯಾದರೂ ಪಕ್ಷದ ಮುಖಂಡರು ಹಾಗೂ ಹೈಕಮಾಂಡ್ ಈ ಬಗ್ಗೆ ಕ್ರಮವಹಿಸಬಹುದೆಂಬ ವಿಶ್ವಾಸವಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.