ಎಚ್.ಡಿ. ಕುಮಾರಸ್ವಾಮಿ
ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಕೆಟ್ಟ ಆಡಳಿತ, ನಡವಳಿಕೆಯಿಂದಲೇ ಮದ್ದೂರಿನಲ್ಲಿ ಗಣಪತಿ ಮೆರವಣಿಗೆ ಮೇಲೆ ಕಲ್ಲು ಎಸೆಯುವಂಥ ಪರಿಸ್ಥಿತಿ ಸೃಷ್ಟಿಯಾಗಿದೆ ಎಂದು ಕೇಂದ್ರ ಸಚಿವ
ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದರು.
‘ಮಂಡ್ಯ ಜಿಲ್ಲೆ ಯಾವಾಗಲೂ ಶಾಂತಿ ಸೌಹಾರ್ದಕ್ಕೆ ಹೆಸರಾಗಿದೆ. ಜನರು ಕಷ್ಟಪಟ್ಟು ಕೆಲಸ ಮಾಡುತ್ತಾ ನೆಮ್ಮದಿ ಜೀವನ ಮಾಡುತ್ತಿದ್ದಾರೆ. ಕುವೆಂಪು ಅವರ ಆಶಯದ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಆದರೆ, ಕೆಲ ಶಕ್ತಿಗಳು ವ್ಯವಸ್ಥಿತವಾಗಿ ಜನರ ನೆಮ್ಮದಿ ಹಾಳು ಮಾಡುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್ ಪಕ್ಷದ ಓಲೈಕೆ ರಾಜಕಾರಣದಿಂದ ಇಂಥ ಕೆಟ್ಟ ಪರಿಸ್ಥಿತಿ ರಾಜ್ಯದ ಉದ್ದಗಲಕ್ಕೂ ಸೃಷ್ಟಿಯಾಗಿದೆ’ ಎಂದರು.
ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವರು ಹೇಳಿದರು.
ಇಂಥ ಗಲಭೆಗಳನ್ನು ನೋಡಿದರೆ ಕಾಂಗ್ರೆಸ್ ಪಕ್ಷದ ಅವನತಿ ಆರಂಭವಾಗಿದೆ ಎಂದು ಅರ್ಥವಾಗುತ್ತದೆ. ಇವೆಲ್ಲವನ್ನೂ ಕಾಂಗ್ರೆಸ್ ಅರ್ಥ ಮಾಡಿಕೊಳ್ಳದಿದ್ದರೆ ಇದು ‘ಸೆಲ್ಪ್ ಸೂಸೈಡ್’ ಆಗಲಿದೆ ಎಂದು
ಎಚ್ಚರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.