ಎಚ್.ಡಿ ಕುಮಾರಸ್ವಾಮಿ
ಮಂಡ್ಯ: ಉಪ ಲೋಕಾಯುಕ್ತರು ಹೇಳಿಕೆ ಮಾತ್ರ ಸೀಮಿತವಾಗಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಟೀಕಿಸಿದರು.
ಸರ್ಕಾರಿ ಇಲಾಖೆಗಳಲ್ಲಿ ಶೇ 63ರಷ್ಟು ಭ್ರಷ್ಟಾಚಾರ ಆರೋಪಕ್ಕೆ ಪ್ರತಿಕ್ರಿಯಿಸಿ, ‘ಉಪಲೋಕಾಯುಕ್ತರಾಗಿ ಅವರು ಏನು ಕೆಲಸ ಮಾಡ್ತಿದ್ದಾರೆ? ಅವರ ಜವಬ್ದಾರಿ ಏನು? ಮಾಧ್ಯಮಗಳ ಮುಂದೆ ಹೇಳಿಕೆ ನೀಡಲಷ್ಟೇ ಅವರಿಗೆ ಅಧಿಕಾರ ನೀಡಲಾಗಿದೆಯಾ? ಇಲ್ಲವೇ ದಾಖಲೆಗಳನ್ನು ಸಂಗ್ರಹಿಸಿ ಕ್ರಮ ತೆಗೆದುಕೊಳ್ಳಲಿಕ್ಕೆ ಅಧಿಕಾರ ನೀಡಲಾಗಿದೆಯಾ? ಯಾರ ಕಾಲದಲ್ಲಿ ಭ್ರಷ್ಟಾಚಾರ ನಡೆಯುತ್ತಿತ್ತು ಅನ್ನೋದು ಬೇರೆ ಚರ್ಚೆ. ಭ್ರಷ್ಟಾಚಾರ ಗೊತ್ತಿದ್ದೂ ಉಪ ಲೋಕಾಯುಕ್ತರು ಹೇಳಿಕೆಗೆ ಸೀಮಿತವಾಗಿದ್ದಾರೆ. ಹೀಗಾದರೆ ಪ್ರಯೋಜನವೇನು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು
2019ರ ಭ್ರಷ್ಟಾಚಾರ ಬಗ್ಗೆ ಉಪ ಲೋಕಾಯುಕ್ತರು ಮಾತಾನಾಡಿದ್ದಾರೆಂದು ಸಿಎಂ ಟ್ವಿಟ್ ಮಾಡಿದ್ದಾರೆಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ‘ಅಧಿಕಾರಕ್ಕೆ ಬಂದು 3 ವರ್ಷ ಆಗಿದೆ. ಈ ಮೂರು ವರ್ಷದ ಆಡಳಿತ ಎಷ್ಟು ಪರಿಶುದ್ಧ, ಪಾರದರ್ಶಕವಾಗಿದೆ ಎಂಬ ಬಗ್ಗೆ ವರದಿ ಮಾಡಿಸಲಿ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.