
ಬೆಂಗಳೂರು: ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು ಓದದೇ ತಾವೇ ಸಿದ್ಧಪಡಿಸಿದ ಭಾಷಣವನ್ನು ಓದಿ ಸದನದಿಂದ ಹೊರನಡೆದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ನಡೆಯನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಮರ್ಥಿಸಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತನ್ನ ವೈಫಲ್ಯಗಳನ್ನು ಜನರಿಂದ ಮರೆಮಾಚುವ ಉದ್ದೇಶದಿಂದ ರಾಜ್ಯ ಸರ್ಕಾರ ಜಂಟಿ ಅಧಿವೇಶನವನ್ನು ದುರುಪಯೋಗಪಡಿಸಿಕೊಂಡಿದೆ’ ಎಂದು ಆರೋಪಿಸಿದ್ದಾರೆ.
ಈ ಸರ್ಕಾರದ ಸಣ್ಣತನದ ನಡವಳಿಕೆಯಿಂದ ಇಂತಹ ಒಂದು ಪ್ರಕರಣ ಕರ್ನಾಟಕದಲ್ಲಿ ಮೊದಲ ಬಾರಿಗೆ ನಡೆದಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
‘ಬೀದಿಯಲ್ಲಿ ಚರ್ಚೆ ಮಾಡುವಂತಹ ವಿಷಯಗಳನ್ನು ಈ ಸರ್ಕಾರ ಮತ್ತು ಅದರ ಮಂತ್ರಿಗಳು ರಾಜ್ಯಪಾಲರ ಮುಖಾಂತರ ವಿಧಾನಸಭೆಯಲ್ಲಿ ಹೇಳಿಸಬೇಕು ಎಂದು ಬಯಸಿದ್ದರು. ಹೀಗಾಗಿ ಇವತ್ತಿನ ಘಟನೆ ನಡೆದಿದೆ’ ಎಂದು ತಿಳಿಸಿದ್ದಾರೆ.
ಒಟ್ಟಾರೆ ಈ ಸರ್ಕಾರ ತನ್ನ ತಪ್ಪುಗಳನ್ನು ಮರೆಮಾಚಲು ಜಂಟಿ ಅಧಿವೇಶನ ದುರುಪಯೋಗಪಡಿಸಿಕೊಂಡಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.