
ಮೈಷುಗರ್ ಶಾಲೆಗೆ ಚೆಕ್ ನೀಡಿದ ಕುಮಾರಸ್ವಾಮಿ
– ಎಕ್ಸ್ ಚಿತ್ರ (ಎಚ್.ಡಿ ಕುಮಾರಸ್ವಾಮಿ)
ಮಂಡ್ಯ: ಇಲ್ಲಿನ ಮೈಷುಗರ್ ಶಾಲೆಯ ಶಿಕ್ಷಕರ ವೇತನ ಪಾವತಿಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ತಮ್ಮ ವೈಯಕ್ತಿಕ ಆದಾಯದಿಂದ ₹ 19.94 ಲಕ್ಷದ ಹಣಕಾಸು ನೆರವು ನೀಡಿದರು.
ಮಂಡ್ಯದಲ್ಲಿರುವ ಮೈಷುಗರ್ ಶಾಲೆಗೆ ಶನಿವಾರ ಭೇಟಿ ನೀಡಿದ ಅವರು, ₹ 19.94 ಲಕ್ಷ ರೂಪಾಯಿ ಮೊತ್ತದ ಚೆಕ್ ವಿತರಿಸಿದರು.
ಇದನ್ನು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಇಲ್ಲಿನ ಶಿಕ್ಷಕರು ಹಲವು ತಿಂಗಳಿನಿಂದ ವೇತನ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದರು. ಅವರಿಗೆ ಸಹಾಯ ಮಾಡುವುದಾಗಿ ಈ ಹಿಂದೆ ಕುಮಾರಸ್ವಾಮಿ ಹೇಳಿದ್ದರು.
ಮುಂದಿನ ದಿನಗಳಲ್ಲಿ ಅತ್ಯುತ್ತಮ ದರ್ಜೆಯ ಮಾದರಿ ಶಾಲೆಯನ್ನಾಗಿ ಅಭಿವೃದ್ಧಿಪಡಿಸಿ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯ ಸಹಾಯ ಮಾಡುವುದಾಗಿ ಇದೇ ವೇಳೆ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.