ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ದೃಢಪಟ್ಟಿದೆ. ಈ ಕುರಿತು ಅವರು ಶನಿವಾರ ಟ್ವೀಟ್ ಮಾಡಿದ್ದಾರೆ.
'ನನ್ನ ಕೋವಿಡ್-19 ಪರೀಕ್ಷೆಯ ವರದಿ ಪಾಸಿಟಿವ್ ಎಂದು ಬಂದಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ.' ಎಂದು ಪ್ರಕಟಿಸಿದ್ದಾರೆ.
ಏಪ್ರಿಲ್ 1ರಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಿಗೆ ಕೋವಿಡ್ ತಗುಲಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಅವರು ಗುಣಮುಖರಾಗಿದ್ದಾರೆ.
ಸರಣಿ ಟ್ವೀಟ್ ಮಾಡಿರುವ ಎಚ್.ಡಿ.ಕುಮಾರಸ್ವಾಮಿ, ಸರ್ಕಾರಿ ರಸ್ತೆ ಸಾರಿಗೆ ನೌಕರರ ಮುಷ್ಕರ ಹಾಗೂ ಚಾಲಕ ಮೃತಪಟ್ಟ ಘಟನೆಗಳ ಕುರಿತು ಪ್ರಸ್ತಾಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.