ADVERTISEMENT

ಮಗುವಿಗೆ ‘ಕನ್ನಡದ ವೃದ್ಧಿ’ ಎಂದು ಹೆಸರಿಟ್ಟ ದಂಪತಿಯನ್ನು ಅಭಿನಂದಿಸಿದ ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 19 ಜನವರಿ 2021, 11:04 IST
Last Updated 19 ಜನವರಿ 2021, 11:04 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ಬೆಂಗಳೂರು: ತಮ್ಮ ಮಗುವಿಗೆ ‘ಕನ್ನಡದ ವೃದ್ಧಿ’ ಎಂದು ಹೆಸರಿಟ್ಟ ಬೆಳಗಾವಿ ದಂಪತಿಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಭಿನಂದಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಬೆಳಗಾವಿ ನಮ್ಮದೆಂಬ ಮಹಾರಾಷ್ಟ್ರಕ್ಕೆ ತಿರುಗೇಟು ನೀಡುವುದು ಒಂದೆಡೆ ಇರಲಿ. ಆದರೆ, ಅಲ್ಲಿನ ಜನರಲ್ಲಿ ಕನ್ನಡಾಭಿಮಾನ ಉತ್ಕಟವಾಗಿದೆ. ಚಿಕ್ಕೋಡಿಯ ಕನ್ನಡ ಪ್ರೇಮಿಗಳಾದ ಸಿದ್ದಗೌಡ–ಅಶ್ವಿನಿ ಪಾಟೀಲ ದಂಪತಿ ತಮ್ಮ ಚೊಚ್ಚಲ ಮಗುವಿಗೆ ‘ಕನ್ನಡದ ವೃದ್ಧಿ’ ಎಂಬ ಹೆಸರಿಟ್ಟಾದರೆ. ಇದು ಅಲ್ಲಿನ ಕನ್ನಡಾಭಿಮಾನಕ್ಕೆ ಸಾಕ್ಷಿ. ಆ ದಂಪತಿಗೆ ನನ್ನ ನಮನ’ ಎಂದು ಬರೆದುಕೊಂಡಿದ್ದಾರೆ.

ಇತ್ತೀಚೆಗೆ ಚಿಕ್ಕೋಡಿ ಪಟ್ಟಣದ ಕನ್ನಡ ಪ್ರೇಮಿಗಳಾದ ಸಿದಗೌಡ–ಅಶ್ವಿನಿ ಪಾಟೀಲ ದಂಪತಿ ತಮ್ಮ ಚೊಚ್ಚಲ ಮಗಳಿಗೆ ನಾದಬ್ರಹ್ಮ ಹಂಸಲೇಖ ಅವರಿಂದ ‘ಕನ್ನಡದ ವೃದ್ಧಿ’ ಎಂಬ ಹೆಸರು ನಾಮಕರಣ ಮಾಡಿಸಿ ಗಮನಸೆಳೆದಿದ್ದರು.

ADVERTISEMENT

ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಅಲ್ಲಿನ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿಕೆ ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ರಾಜಕೀಯ, ಸಾಮಾಜಿಕ, ಸಾಹಿತ್ಯಕ ಹೀಗೆ ಎಲ್ಲ ವಲಯಗಳಿಂದ ತೀವ್ರ ಪ್ರತಿರೋಧ, ಪ್ರತಿಭಟನೆ, ಖಂಡನೆ ವ್ಯಕ್ತವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.