ADVERTISEMENT

ಕೇತಗಾನಹಳ್ಳಿ ಸರ್ಕಾರಿ ಭೂಮಿ ಒತ್ತುವರಿ: HDK ವಿರುದ್ಧ ತನಿಖೆಗೆ ಎರಡು ವಾರ ತಡೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 0:05 IST
Last Updated 16 ಸೆಪ್ಟೆಂಬರ್ 2025, 0:05 IST
<div class="paragraphs"><p>ಎಚ್‌ಡಿಕೆ </p></div>

ಎಚ್‌ಡಿಕೆ

   

ನವದೆಹಲಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಕೇತಗಾನಹಳ್ಳಿಯ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (ವಿಶೇಷ ತನಿಖಾ ತಂಡ) ತನಿಖೆಗೆ ಹೈಕೋರ್ಟ್‌ ವಿಭಾಗೀಯ ಪೀಠ ನೀಡಿದ್ದ ಅನುಮತಿ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಎರಡು ವಾರಗಳ ತಡೆ ನೀಡಿದೆ. 

ಸೆಪ್ಟೆಂಬರ್ 8ರಂದು ವಿಭಾಗೀಯ ಪೀಠ ನೀಡಿದ ಆದೇಶಕ್ಕೆ ತಡೆಕೋರಿ ಕುಮಾರಸ್ವಾಮಿ ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಪಂಕಜ್ ಮಿತ್ತಲ್ ಮತ್ತು ಪ್ರಸನ್ನ ವರಾಲೆ ಅವರಿದ್ದ ನ್ಯಾಯಪೀಠವು ಸೋಮವಾರ ವಿಚಾರಣೆ ನಡೆಸಿತು.

ADVERTISEMENT

‘ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರು ಕೇತಗಾನಹಳ್ಳಿಯ ಸರ್ವೆ ನಂಬರ್‌ 8, 9, 10, 16, 17 ಮತ್ತು 79ರಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯ ಅನುಸಾರ ಕ್ರಮ ಕೈಗೊಳ್ಳಬೇಕು ಎಂದು 2020ರಲ್ಲಿ ಹೈಕೋರ್ಟ್‌ ಆದೇಶಿಸಿತ್ತು. ಆದರೆ, ಈ ಆದೇಶವನ್ನು ಜಾರಿಗೊಳಿಸಿಲ್ಲ’ ಎಂದು ಆರೋಪಿಸಿ ಸಮಾಜ ಪರಿವರ್ತನಾ ಸಮುದಾಯವು ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ನಲ್ಲಿ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್‌ ಸೂಚಿಸಿತ್ತು. 

14 ಎಕರೆ ಜಮೀನಿನ ಮಾಲೀಕತ್ವದ ಕುರಿತಂತೆ ವಿಚಾರಣೆ ನಡೆಸಲು ಐಎಎಸ್‌ ಅಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್‌ ನೇತೃತ್ವದಲ್ಲಿ ಎಸ್‌ಐಟಿ ರಚಿಸಲಾಗಿತ್ತು. ಎಸ್‌ಐಟಿ ರಚನೆ ಮತ್ತು ತಹಶೀಲ್ದಾರ್ ಹೊರಡಿಸಿದ ನೋಟಿಸ್‌ಗೆ ಹೈಕೋರ್ಟ್‌ ಏಕಸದಸ್ಯ ಪೀಠ ತಡೆ ನೀಡಿತ್ತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.