ADVERTISEMENT

ಎಚ್‌ಡಿಕೆ ಕೊಲೆ ಬೆದರಿಕೆ ಗಂಭೀರವಾಗಿ ಪರಿಗಣಿಸಿ ತನಿಖೆಯಾಗಬೇಕು: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 10:35 IST
Last Updated 26 ಜನವರಿ 2020, 10:35 IST
   

ಬೆಂಗಳೂರು:ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 14 ಗಣ್ಯರಿಗೆ ಕೊಲೆ ಬೆದರಿಕೆಯೊಡ್ಡಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರು ಅವರು, ‘ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ 14 ಗಣ್ಯರಿಗೆ ಕೊಲೆ ಬೆದರಿಕೆ ಪತ್ರ ಬರೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದರ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಭಯದ ವಾತಾವರಣ ಸೃಷ್ಟಿಸಿ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಗೊಳಿಸುವ ಯಾವುದೇ ಶಕ್ತಿಗಳಾದರೂ ಸರಿ ಅಂಥವರಿಗೆ ತಕ್ಕ ಶಿಕ್ಷೆಯಾಗಲೇಬೇಕು’ ಎಂದು ಒತ್ತಾಯಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲೂರು ಮಠದ ನಿಜಗುಣಾನಂದ ಸ್ವಾಮೀಜಿ ಅವರನ್ನು ಇದೇ ತಿಂಗಳ 29ರಂದು ‘ಸಂಹಾರ’ ಮಾಡುವುದಾಗಿ ಬೆದರಿಕೆ ಪತ್ರವೊಂದು ಇತ್ತೀಚೆಗೆ ಅವರ ಮಠಕ್ಕೆ ಬಂದಿತ್ತು.ಬಜರಂಗದಳದ ಮಾಜಿ ನಾಯಕ ಮಹೇಂದ್ರಕುಮಾರ್‌, ನಿಡುಮಾಮಿಡಿ ವೀರಭದ್ರ ಸ್ವಾಮೀಜಿ, ಚಿತ್ರನಟ ಪ್ರಕಾಶ್‌ ರಾಜ್‌, ಚೇತನಕುಮಾರ್‌, ಬಿ.ಟಿ. ಲಲಿತಾ ನಾಯಕ, ಮಹೇಶ್ಚಂದ್ರ ಗುರು, ಭಗವಾನ್‌, ದಿನೇಶ ಅಮಿನ್‌ ಮಟ್ಟು, ರೌಡಿ ಅಗ್ನಿ ಶ್ರೀಧರ್‌, ಬೃಂದಾ ಕಾರಟ್‌ ಅವರನ್ನೂ ಹತ್ಯೆ ಮಾಡಲಾಗುವುದು ಎಂದುಬೆದರಿಕೆ ಪತ್ರದಲ್ಲಿ ಉಲ್ಲೇಖವಾಗಿತ್ತು.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.