ADVERTISEMENT

ಮೂರನೇ ರಾಷ್ಟ್ರದ ಮಧ್ಯಸ್ಥಿಕೆ ಇಲ್ಲ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 12 ಮೇ 2025, 15:46 IST
Last Updated 12 ಮೇ 2025, 15:46 IST
<div class="paragraphs"><p>ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ</p></div>

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

   

ಬೆಂಗಳೂರು: ‘ಅಮೆರಿಕದ ಮಧ್ಯಸ್ಥಿಕೆಯಲ್ಲಿ ಕದನವಿರಾಮ ಅನ್ನುವುದು ಸರಿಯಲ್ಲ. ಜಾಗತಿಕ ಮಟ್ಟದಲ್ಲಿ ತನ್ನ ಮುಖ ಉಳಿಸಿಕೊಳ್ಳಲು ಪಾಕಿಸ್ತಾನ ನಾನಾ ಸರ್ಕಸ್‌ ಮಾಡಿದೆ’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕಾಶ್ಮೀರದ ವಿಷಯದಲ್ಲಿ ಭಾರತ ಎಂದಿಗೂ ಮೂರನೇ ರಾಷ್ಟ್ರದ ಮಧ್ಯಸ್ಥಿಕೆ ಒಪ್ಪಿಲ್ಲ. ಅದಕ್ಕೆ ಅವಕಾಶವನ್ನು ಕೂಡ ಕೊಟ್ಟಿಲ್ಲ. ಪ್ರಧಾನಿ ಮೋದಿ ಅವರು ಇದೇ ಮಾತನ್ನು ಸ್ಪಷ್ಟವಾಗಿ ಹೇಳಿದ್ದು, ರಾಷ್ಟ್ರೀಯ ಹಿತಾಸಕ್ತಿ ವಿಷಯದಲ್ಲಿ ಮೋದಿ ಅವರು ಎಂದಿಗೂ ರಾಜಿ ಮಾಡಿಕೊಳ್ಳುವುದಿಲ್ಲ’ ಎಂದರು.

ADVERTISEMENT

‘ರಾಷ್ಟ್ರೀಯ ಭದ್ರತೆ ಮತ್ತು ರಕ್ಷಣೆ ವಿಚಾರದಲ್ಲಿ ಮೋದಿ ಸರ್ಕಾರ ದೃಢ ಹೆಜ್ಜೆಗಳನ್ನು ಇಟ್ಟಿದ್ದು, ನಮ್ಮ ಮೇಲೆ ದಾಳಿ ನಡೆಸಿದ ರಾಷ್ಟ್ರಕ್ಕೆ ನಮ್ಮ ಸೇನಾ ಪಡೆಗಳು ತಕ್ಕ ಪಾಠ ಕಲಿಸಿವೆ. ಪಾಕಿಸ್ತಾನವನ್ನು ಮಟ್ಟ ಹಾಕುವ ದೃಷ್ಟಿಯಿಂದ ಪೂರ್ಣ ಪ್ರಮಾಣದ ಯುದ್ಧ ಆಗಲೇಬೇಕಿತ್ತು ಎಂಬ ನಿಲುವು ಒಂದು ಕಡೆ ಇದೆ. ಮತ್ತೊಂದು ಕಡೆ ರಷ್ಯಾ, ಉಕ್ರೇನ್‌ ಯುದ್ಧದಿಂದ ಇವತ್ತು ಯಾವ ಸ್ಥಿತಿ ಉಂಟಾಗಿದೆ ಎನ್ನುವ ವಾದವೂ ಇನ್ನೊಂದೆಡೆ ಇದೆ. ಈಗಲಾದರೂ ಪಾಕಿಸ್ತಾನ ಎಚ್ಚೆತ್ತುಕೊಳ್ಳದಿದ್ದರೆ ಅದು ಮುಂದಿನ ದಿನಗಳಲ್ಲಿ ಸಂಪೂರ್ಣವಾಗಿ ನಾಶವಾಗಲಿದೆ’ ಎಂದು ಅವರು ಎಚ್ಚರಿಕೆ ಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.