
ಪ್ರಜಾವಾಣಿ ವಾರ್ತೆ
ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ‘ಸದ್ಯದ ರಾಜಕೀಯ ಬೆಳವಣಿಗೆ ನೋಡಿ ನನಗೆ ವೈರಾಗ್ಯ ಆವರಿಸುತ್ತಿದೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ತಾಲ್ಲೂಕಿನ ಪಾಲಹಳ್ಳಿ ಗ್ರಾಮದಲ್ಲಿ ಜೀರ್ಣೋದ್ಧಾರ ಮಾಡಿರುವ ತಿರುಮಲ ವೆಂಕಟರಮಣಸ್ವಾಮಿ ದೇವಾಲಯ ಮತ್ತು ಸಮುದಾಯ ಭವನ ಉದ್ಘಾಟನಾ ಸಮಾರಂಭದಲ್ಲಿ ಶನಿವಾರ ಅವರು ಮಾತನಾಡಿದರು.
ಐದು ಬಾರಿ ಸಾವಿನ ಮನೆಯ ಕದ ತಟ್ಟಿ ಬಂದಿದ್ದೇನೆ. ದೇವರ ಕೃಪೆಯಿಂದ ಬದುಕಿ ಉಳಿದಿದ್ದೇನೆ. ರಾಜ್ಯ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಮದ್ಯ, ವಿದ್ಯುತ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ ಎಂದು ಟೀಕಿಸಿದರು.
ಐದು ವರ್ಷ ಸರ್ಕಾರ ನಡೆಸಲು, ರಾಜ್ಯದ ಜನರು ಅವಕಾಶ ನೀಡಿದರೆ ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯ ಮಾಡುತ್ತೇನೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.