ADVERTISEMENT

ಉಕ್ರೇನ್‌ನಿಂದ ವಿದ್ಯಾರ್ಥಿಗಳ ವಾಪಸ್: ಸರ್ಕಾರ ಆರಂಭದಲ್ಲೇ ಎಡವಿದೆ- ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 6 ಮಾರ್ಚ್ 2022, 5:53 IST
Last Updated 6 ಮಾರ್ಚ್ 2022, 5:53 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ    

ಕಲಬುರಗಿ: ಉಕ್ರೇನ್‌ನಲ್ಲಿ ಯುದ್ಧದ ಸನ್ನಿವೇಶದ ಬಗ್ಗೆ ಮಾಹಿತಿ ಇದ್ದರೂ ಭಾರತ ಸರ್ಕಾರ ತನ್ನ ರಾಜತಾಂತ್ರಿಕ ಸಂಬಂಧಗಳನ್ನು ಬಳಸಿಕೊಂಡು ಭಾರತೀಯ ವಿದ್ಯಾರ್ಥಿಗಳನ್ನು ವಾಪಸ್ ಕರೆತರುವಲ್ಲಿ ಆರಂಭದಲ್ಲೇ ಎಡವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.

ನಗರದಲ್ಲಿ ಭಾನುವಾರ ಯುನೈಟೆಡ್ ಆಸ್ಪತ್ರೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಸ್ನೇಹವನ್ನು ಬಳಸಿಕೊಂಡು ಮುಂಚೆಯೇ ಅಗತ್ಯವಿರುವಷ್ಟು ವಿಮಾನಗಳನ್ನು ಕಳಿಸಿ ವಿದ್ಯಾರ್ಥಿಗಳು ಹಾಗೂ ನಾಗರಿಕರನ್ನು ಕರೆಸಿಕೊಂಡಿದ್ದರೆ ಇಷ್ಟೊಂದು ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದರು.

ADVERTISEMENT

ಕಾಂಗ್ರೆಸ್ ಮುಖಂಡ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‌ಗೆ ವಾಪಸಾಗುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಬ್ರಾಹಿಂ ಅವರು ಸದ್ಯಕ್ಕೆ ಬಾಡಿಗೆ ಮನೆಯಲ್ಲಿದ್ದಾರೆ. ಶೀಘ್ರವೇ ಸ್ವಂತ ಮನೆಗೆ ಮರಳಲಿದ್ದಾರೆ ಎಂದು ಜೆಡಿಎಸ್‌ಗೆ ಮರಳುವುದನ್ನು ಖಚಿತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.