ADVERTISEMENT

ಸಿದ್ದರಾಮಯ್ಯ ರಾಜಕೀಯ ತೆವಲಿಗೆ ಮಾತನಾಡೋದು ಬಿಡಿ: ಎಚ್.ಡಿ. ಕುಮಾರಸ್ವಾಮಿ

ಜಾತಿ ಸಮೀಕ್ಷೆ ಬಿಡುಗಡೆಗೆ ಕುಮಾರಸ್ವಾಮಿ ಅಡ್ಡಗಾಲು ಹಾಕಿದ್ರು ಅನ್ನೋ ಸಿದ್ದರಾಮಯ್ಯ ಹೇಳಿಕೆ ವಿಚಾರ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2020, 10:25 IST
Last Updated 19 ಅಕ್ಟೋಬರ್ 2020, 10:25 IST
ಜೆಡಿಸ್ ನಾಯಕ ಎಚ್.ಡಿ. ಕುಮಾರಸ್ವಾಮಿ
ಜೆಡಿಸ್ ನಾಯಕ ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ರಾಜಕೀಯ ತೆವಲಿಗೆ ಏನೇನೋ ಮಾತಾಡುವುದು ಬೇಡ. ಸಿದ್ದರಾಮಯ್ಯಗೆ ನಿನ್ನೆ ರಾತ್ರಿ ಕನಸ್ಸು ಬಿತ್ತಂತಾ? ನನ್ನ ವಿರುದ್ದ ಟೀಕೆ ಮಾಡೋಕೆ ಬೇರೆ ವಿಚಾರಗಳು ಇಲ್ಲ. ಜನರನ್ನ ಮರಳು ಮಾಡೋಕೆ ಬತ್ತಳಿಕೆಯಲ್ಲಿ ಯಾವುದೇ ಅಸ್ತ್ರಗಳು ಇಲ್ಲ. ಹಳೆಯದನ್ನು ಮತ್ತೆ ಕೆದಕಿಕೊಂಡು ಹೊರಟಿದ್ದಾರೆ ಎಂದು ಜೆಡಿಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಇದ್ದರು. ಒಂದೂ ದಿನವೂ ಸಮೀಕ್ಷೆ ವಿಚಾರ ಚರ್ಚೆಯೇ ಮಾಡಿಲ್ಲ. ಕಾಂಗ್ರೆಸ್‌ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳ್ತಾರೆ. ಬೇರೆ ವಿಷಯ ಅವರ ಬಳಿ ಇಲ್ಲ. ಹೀಗಾಗಿ ನನ್ನ ಮೇಲೆ ಅಪಾದನೆ ಮಾಡ್ತಿದ್ದಾರೆ. ಈಗ ಹಿಂದುಳಿದವರ ಬಗ್ಗೆ ಇವರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನ ಕೆಣಕಬೇಡಿ ಎಚ್ಚರಿಕೆ ಕೊಡ್ತಿದ್ದೇನೆ ಎಂದಿದ್ದಾರೆ.

ನನ್ನ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಲಿ. ನಿಮ್ಮ ತೆವಲಿಗೆ ಸಮಾಜಗಳನ್ನ ನನ್ನ ವಿರುದ್ದ ಎತ್ತಿಕಟ್ಟಿದ್ದೀರಾ ಗೊತ್ತಿದೆ. ರಾಜಕೀಯದ ತೆವಲು ತೀರಿಸಿಕೊಳ್ಳಲು ಹೊರಟಿದ್ದೀರಿ. ಇದು ಬಹಳ ದಿನ ನಡೆಯೊಲ್ಲ. ಯಾಕೆ ನನ್ನನ್ನ ಕೆಣಕುತ್ತೀರಾ. ಅವತ್ತು ನಿಮಗೆ ಜವಾಬ್ದಾರಿ ಇರಲಿಲ್ಲವಾ? ಅವತ್ತು ನಾನು ವಿರೋಧ ಮಾಡಿದ್ರೆ ಅವತ್ತೆ ಬೆಂಬಲ ವಾಪಸ್ ಪಡೆಯಬೇಕಿತ್ತು. ಈಗ ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

ADVERTISEMENT

ಸಿದ್ದರಾಮಯ್ಯಗೆ ನನ್ನ ಭಯ ಇದೆ. ಜನರಿಂದ ಮತ್ತೆ ಮೇಲೆ ಬರುತ್ತೀನಿ ಎನ್ನುವ ಸೂಚನೆ ಅವರಿಗೆ ಇದೆ. ಈಗ ನನಗೆ ಹಿನ್ನಡೆ ಆಗಿರಬಹುದು. ಆದರೆ ಈ ರಾಜ್ಯದ ಜನ ಜಾತಿ-ಭೇದ ಮರೆತು ಮತ್ತೆ ಕುಮಾರಸ್ವಾಮಿ ಬೇಕು ಅನ್ನೋ ದಿನಗಳು ಬರುತ್ತವೆ ಎಂದು ತಿಳಿಸಿದರು.

ಸಿದ್ದರಾಮಯ್ಯಗೆ ಬಿಜೆಪಿ ಕಣ್ಣಿಗೆ ಕಾಣ್ತಿಲ್ಲ. ಜೆಡಿಎಸ್ ಮಾತ್ರ ಕಾಣ್ತಿದೆ. ಅವ್ರಿಗೆ ಜೆಡಿಎಸ್ ಮುಗಿಸಬೇಕು. ಯಾಕಂದ್ರೆ ಅವ್ರನ್ನ ಬೆಳೆಸಿದ್ವಿ ಅಲ್ಲವಾ ಅ ತಪ್ಪಿಗೆ. ಹೀಗಾಗಿ ನನ್ನ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತಾಡೋದು ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.