ADVERTISEMENT

ಋಣಮುಕ್ತ ಕಾಯ್ದೆ ಜಾರಿಗೆ, ನನಗೆ ಸಹಕರಿಸಿದ ಅಧಿಕಾರಿಗಳಿಗೆ ಧನ್ಯವಾದಗಳು: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 24 ಜುಲೈ 2019, 11:38 IST
Last Updated 24 ಜುಲೈ 2019, 11:38 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ಕಳೆದ 14 ತಿಂಗಳ ಕಾಲ ಆಡಳಿತ ನಡೆಸಲು ನನಗೆ ಸಹಕರಿಸಿದ ಎಲ್ಲ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ನಿರ್ಗಮಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು.

ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ಪ್ರತಿನಿತ್ಯವೂ ನಡೆಯುತ್ತಿತ್ತು. ಹಲವು ಸಮಸ್ಯೆಗಳ ನಡುವೆಯೂ ರಾಜ್ಯದ ಅಭಿವೃದ್ಧಿಗಾಗಿ ಅಧಿಕಾರಿಗಳು ನೀಡಿದ ಕೊಡುಗೆ ಆಪಾರವಾದದ್ದು ಎಂದರು.

ರಾಜಕಾರಣದಲ್ಲಿ ಏನೂ ಬೇಕಾದರೂ ಆಗಬಹುದು. ಮುಂದಿನ ದಿನಗಳಲ್ಲೂ ಕೂಡ ಅಸ್ಥಿರತೆ ಮುಂದುವರಿಯಲಿದೆ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಆರ್ಥಿಕ ಶಿಸ್ತನ್ನು ಕಾಪಾಡಿದ್ದೇವೆ ಎಂದು ತಿಳಿಸಿದರು.

ADVERTISEMENT

ಋಣಮುಕ್ತ ಕಾಯ್ದೆ ಜಾರಿಗೆ: ನಾನು ಅಧಿಕಾರದಿಂದ ನಿರ್ಗಮಿಸುವ ಮುನ್ನ ಋಣಮುಕ್ತ ಕಾಯ್ದೆಯನ್ನು ಜಾರಿಗೊಳಿಸಿದ್ದೇವೆ. ಈ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.

ಈ ಕಾಯ್ದೆ ಜಾರಿಯಾಗುವುದಕ್ಕೂ ಮುನ್ನ ಖಾಸಗಿಯವರಿಂದ ಪಡೆದ ಕೈ ಸಾಲವನ್ನು ಮನ್ನಾ ಮಾಡಲಾಗುತ್ತದೆ. ಇದರಿಂದ ಭೂಮಿ ಇಲ್ಲದ ಹಾಗೂ 2 ಎಕರೆಗಿಂತಲ್ಲೂ ಕಡಿಮೆ ಭೂಮಿ ಹೊಂದಿರುವ ಬಡ ರೈತರಿಗೆ ಅನುಕೂಲವಾಗಲಿದೆ.

ವಾರ್ಷಿಕ ಆದಾಯ 1.20 ಲಕ್ಷ ವರಮಾನ ಹೊಂದಿರುವ ಸಂಬಂಧಪಟ್ಟ ಫಲಾನುಭವಿಗಳು ನೋಡಲ್‌ ಅಧಿಕಾರಿಗಳನ್ನು ಭೇಟಿಯಾಗಿ ಸೂಕ್ತ ದಾಖಲೆಗಳನ್ನು 90 ದಿನಗಳ ಒಳಗೆ ಸಲ್ಲಿಸಬೇಕು.

ನಾನು ಅಧಿಕಾರಕ್ಕೆ ಬಂದಾಗ ರಾಜ್ಯದ ಜನತೆಗೆ ಸಿಹಿ ಸುದ್ದಿಯೊಂದನ್ನು ನೀಡುವುದಾಗಿ ಮಾತು ನೀಡಿದ್ದೆ. ಆ ಮಾತನ್ನು ನಾನು ಉಳಿಸಿಕೊಂಡಿದ್ದೇನೆ ಎಂದು ಹೇಳಿದರು.

‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.