ಬೆಂಗಳೂರು: ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮುಂದುವರಿಸುವ ಕುರಿತು ಕಾದು ನೋಡೋಣ ಎಂದು ಹಂಗಾಮಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಹೇಳಿದರು.
ಬುಧವಾರ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕರು ಏನು ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ. ಶಾಸಕಾಂಗ ಸಭೆಯಲ್ಲಿ ಪಕ್ಷದ ಮುಂದಿನ ಕಾರ್ಯತಂತ್ರ ಕುರಿತು ಚರ್ಚಿಸುತ್ತೇವೆ’ ಎಂದು ಹೇಳಿದರು.
ಇದನ್ನೂ ಓದಿ...ಬಿಎಸ್ವೈ ಮುಂದಿನ ಸಿಎಂ ಎಂಬುದು ಖುಷಿ ವಿಚಾರ: ಸಂಸದೆ ಸುಮಲತಾ
‘ಸರ್ಕಾರ ಪತನಗೊಳಿಸಲು ಬಿಜೆಪಿ ನಾಯಕರು ನಡೆಸಿರುವ ಶಾಸಕರ ಕುದುರೆ ವ್ಯಾಪಾರ ಕುರಿತು ಪ್ರತಿಕ್ರಿಯೆ ನೀಡುವುದಿಲ್ಲ. ಅದು ಮುಗಿದ ಅಧ್ಯಾಯ’ ಎಂದರು.
‘ಪ್ರಜಾವಾಣಿ’ ಸುದ್ದಿ, ಬರಹಗಳಲ್ಲಿ ರಾಜಕೀಯ ಬೆಳವಣಿಗೆಗಳ ಸಮಗ್ರ ನೋಟ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.