ADVERTISEMENT

ಶ್ರೀಲಂಕಾ ಸ್ಫೋಟದಿಂದ ಮನಸ್ಸಿಗೆ ನೋವು: ಪ್ರಕೃತಿ ಚಿಕಿತ್ಸೆ ಮೊಟಕುಗೊಳಿಸಿದ ಸಿಎಂ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2019, 13:50 IST
Last Updated 23 ಏಪ್ರಿಲ್ 2019, 13:50 IST
   

ಉಡುಪಿ: ‘ಶ್ರೀಲಂಕಾ ಸ್ಫೋಟ ಪ್ರಕರಣದಿಂದ ಮನಸ್ಸು ಘಾಸಿಯಾಗಿದ್ದು, ಆಯುರ್ವೇದ ಪ್ರಕೃತಿ ಚಿಕಿತ್ಸೆಯನ್ನು ಮೊಟಕುಗೊಳಿಸಿ ಬೆಂಗಳೂರಿಗೆ ತೆರಳುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.

ಕಾಪುವಿನಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಆರೋಗ್ಯ ಸುಧಾರಿಸಿಕೊಳ್ಳಲು ಚಿಕಿತ್ಸೆ ಪಡೆಯಲು ಬಂದಿದ್ದೆ. ಆದರೆ, ಶ್ರೀಲಂಕಾ ಸ್ಫೋಟದಿಂದ ಮನಸ್ಸಿಗೆ ನೋವಾಗಿದೆ. ಆತ್ಮೀಯರ ಸಾವು ಕಾಡುತ್ತಿದೆ. ಹಾಗಾಗಿ, ಚಿಕಿತ್ಸೆ ಅರ್ಧಕ್ಕೆ ನಿಲ್ಲಿಸಿ ತೆರಳುತ್ತಿದ್ದೇನೆ’ ಎಂದರು.‌

ಸರಣಿ ಬಾಂಬ್ ಸ್ಫೋಟದಲ್ಲಿ 300ಕ್ಕೂ ಹೆಚ್ಚು ಮಂದಿ ಮೃತರಾಗಿದ್ದು, ರಾಜ್ಯದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ. ಜೆಡಿಎಸ್ ಪಕ್ಷಕ್ಕೆ ಆಧಾರ ಸ್ತಂಭವಾಗಿದ್ದ ಹನುಮಂತರಾಯಪ್ಪ, ರಂಗಣ್ಣ, ಶಿವಣ್ಣ, ಲಕ್ಷ್ಮೀನಾರಾಯಣ, ರಮೇಶ್ ಸಾವನ್ನಪ್ಪಿದ್ದು, ಪಕ್ಷ ಪ್ರಾಮಾಣಿಕವಾಗಿ ಸೇವೆ ಮಾಡುವವರನ್ನು ಕಳೆದುಕೊಂಡಿದ್ದೇನೆ ಎಂದರು.

ADVERTISEMENT

ಶ್ರೀಲಂಕಾ ಸಚಿವಾಲಯದ ಜತೆ ನಿರಂತರ ಸಂಪರ್ಕದಲ್ಲಿರುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ. 24 ಗಂಟೆಯೊಳಗೆ ಶವಗಳನ್ನು ಭಾರತಕ್ಕೆ ತರಲು ಯತ್ನಿಸಲಾಗುತ್ತಿದ್ದು, ಇದಕ್ಕಾಗಿ ಖಾಸಗಿ ಏರ್ ಕಾರ್ಗೋ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಬೆಳಿಗ್ಗೆ ಮೃತದೇಹಗಳು ಕರ್ನಾಟಕಕ್ಕೆ ಬರುವ ಸಾದ್ಯತೆ ಇದೆ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದರು.

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2 ದಿನಗಳಿಂದ ಕಾಪುವಿನ ಮೂಳೂರಿನಲ್ಲಿರುವ ಸಾಯಿರಾಧಾ ಹೆರಿಟೇಜ್‌ನಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.