ADVERTISEMENT

ಇನ್ನು 6-7 ತಿಂಗಳಲ್ಲಿ ಮುಖ್ಯಮಂತ್ರಿಯಾಗುವೆ: ಎಚ್‌.ಡಿ.ಕುಮಾರಸ್ವಾಮಿ

ದಾಸರಹಳ್ಳಿ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 14 ಆಗಸ್ಟ್ 2022, 21:52 IST
Last Updated 14 ಆಗಸ್ಟ್ 2022, 21:52 IST
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ನಡೆದ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿದರು. ಶಾಸಕ ಮಂಜುನಾಥ್ ಇದ್ದರು
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ನಡೆದ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮಾತನಾಡಿದರು. ಶಾಸಕ ಮಂಜುನಾಥ್ ಇದ್ದರು   

ಬೆಂಗಳೂರು: ‘ಇನ್ನು 6-7 ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ಯಾರು ತಪ್ಪಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮತ್ತು ಬಿಜೆಪಿಗಿಂತ ಜೆಡಿಎಸ್ ಪಕ್ಷ ಹೆಚ್ಚು ಕ್ಷೇತ್ರಗಳಲ್ಲಿ ಜಯಗಳಿಸಲಿದೆ’ ಎಂದುಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿವಿಶ್ವಾಸ ವ್ಯಕ್ತಪಡಿಸಿದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ನಡೆದ ಮತಗಟ್ಟೆ ಮಟ್ಟದ ಜೆಡಿಎಸ್ ಕಾರ್ಯಾಗಾರದಲ್ಲಿ ಸಮಾರೋಪದಲ್ಲಿ ಮಾತನಾಡಿದರು. ‘ಗುಪ್ತಗಾಮಿನಿಯಂತೆ ಪಕ್ಷದ ಪರವಾಗಿ

ಜನರ ಒಲವು ವ್ಯಕ್ತವಾಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳ ರಾಜ ಕೀಯ ಚೇಷ್ಟೆಗಳಿಂದ ಕನ್ನಡಿಗರು ರೋಸಿ ಹೋಗಿದ್ದಾರೆ. ಶಾಸಕರಿಗೆ ಬಲ ತುಂಬುವ ಕೆಲಸ ಮಾಡಬೇಕು’ ಎಂದರು.

ADVERTISEMENT

‘ಬಿಜೆಪಿ ಸರ್ಕಾರ ಎಲ್ಲ ಕ್ಷೇತ್ರಗಳಲ್ಲೂ ವಿಫಲವಾಗಿದೆ. ಕೋವಿಡ್‌ ನಿಂದ ಮೃತಪಟ್ಟವರಿಗೆ ಪರಿಹಾರ ನೀಡಲಾಗುವುದು ಎಂದು ಹೇಳಿ, ಭರವಸೆ ಈಡೇರಿಸಲಿಲ್ಲ. ಬೆಂಗಳೂರಿನಲ್ಲಿ ಕೆಲಸ ಮಾಡದೇ ಹಣವನ್ನು ಲೂಟಿ ಮಾಡುತ್ತಿದ್ದಾರೆ’ ಎಂದೂ ವಾಗ್ದಾಳಿ ನಡೆಸಿದರು.

ದಾಸರಹಳ್ಳಿ ಶಾಸಕ ಮಂಜುನಾಥ್ ಮಾತನಾಡಿ, ‘ಕ್ಷೇತ್ರದ ಪ್ರಗತಿಗೆ ಹಗಲಿರುಳು ಕೆಲಸ ಮಾಡಿದ್ದೇನೆ. ಬಿಜೆಪಿ ಸರ್ಕಾರ ಹೆಜ್ಜೆಹೆಜ್ಜೆಗೂ ಕಿರುಕುಳ ನೀಡಿದೆ. ಕುಮಾರಸ್ವಾಮಿ ಸಹಕಾರದೊಂದಿಗೆ ಉತ್ತಮ ಕೆಲಸ ಮಾಡಿದ್ದೇನೆ’ ಎಂದರು.

ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ ಅವರು ಬೂತ್ ಮಟ್ಟದಲ್ಲಿ ಹೇಗೆ ಕೆಲಸ ಮಾಡಬೇಕು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.