ADVERTISEMENT

ರಾಯಣ್ಣ ಪ್ರತಿಮೆ ಭಗ್ನ | ಷಡ್ಯಂತ್ರ ಮಾಡಿದವರಿಗೂ ಶಿಕ್ಷೆಯಾಗಲಿ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 19:45 IST
Last Updated 20 ಡಿಸೆಂಬರ್ 2021, 19:45 IST
ಕುಮಾರಸ್ವಾಮಿ
ಕುಮಾರಸ್ವಾಮಿ   

ಬೆಂಗಳೂರು: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿ, ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಯ ಹಿಂದೆ ಷಡ್ಯಂತ್ರ ನಡೆಸಿರುವವರನ್ನು ಪತ್ತೆಹಚ್ಚಿ, ಶಿಕ್ಷಿಸಬೇಕು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಆಗ್ರಹಿಸಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ಕೃತ್ಯದಲ್ಲಿ ಭಾಗಿಯಾಗಿರುವ ಸಂಘಟನೆಗಳನ್ನು ರಾಜ್ಯದಲ್ಲಿ ನಿಷೇಧಿಸಬೇಕು. ತಪ್ಪಿತಸ್ಥರನ್ನು ಗಡೀಪಾರು ಮಾಡಬೇಕು. ಕೃತ್ಯಕ್ಕೆ ಷಡ್ಯಂತ್ರ ನಡೆಸಿದವರಿಗೆ ತಕ್ಕ ಶಾಸ್ತಿ ಮಾಡಬೇಕು’ ಎಂದು ಒತ್ತಾಯಿಸಿದರು.

ಎರಡೂ ರಾಜ್ಯಗಳ ನಡುವೆ ದ್ವೇಷ ಬಿತ್ತುವವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿಯವರು ಬೆಂಬಲ ನೀಡಬಾ
ರದು. ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ನಿಷೇಧಿಸುವ ಕುರಿತುಇಲ್ಲಿನ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿಗ್ಗಾಂವಿಯಲ್ಲಿ ಭಾವನಾತ್ಮಕವಾಗಿ ಮಾತನಾಡಿರುವುದರಲ್ಲಿ ತಪ್ಪೇನೂ ಇಲ್ಲ. ಎಂದು ಕುಮಾರಸ್ವಾಮಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.