ADVERTISEMENT

ಎರಡು ಕಡೆ ಸ್ಪರ್ಧಿಸಲ್ಲ: ಎಚ್.ಡಿ. ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 18:51 IST
Last Updated 22 ಅಕ್ಟೋಬರ್ 2022, 18:51 IST
   

ಚನ್ನಪಟ್ಟಣ: ‘ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಮಾತೇ ಇಲ್ಲ. ಚನ್ನಪಟ್ಟಣದಲ್ಲಿ ಮಾತ್ರ ಸ್ಪರ್ಧಿಸುತ್ತೇನೆ’ ಎಂದು ಶಾಸಕ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಗರದಲ್ಲಿ ಶನಿವಾರ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಕಚೇರಿ ಉದ್ಘಾಟಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

‘ರಾಜ್ಯದ ಹಲವೆಡೆ ಸ್ಪರ್ಧಿಸಲು ಒತ್ತಾಯ ಇದೆ. ನಾನು ಟೂರಿಂಗ್ ಟಾಕೀಸ್ ಅಲ್ಲ ಎಂದು ಪಕ್ಷದ ಅಭಿಮಾನಿಗಳಿಗೆ ಹೇಳಿದ್ದೇನೆ. ಮಂಡ್ಯ ಜಿಲ್ಲೆಯ ಕೆಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಒತ್ತಾಯಿಸಿದ್ದಾರೆ. ಆದರೆ, ಚನ್ನಪಟ್ಟಣ ಹೊರತುಪಡಿಸಿ ಬೇರೆಲ್ಲೂ ಸ್ಪರ್ಧಿಸುವುದಿಲ್ಲ’ ಎಂದರು.

ADVERTISEMENT

ಕಳೆದ ಬಾರಿ ಎರಡು ಕ್ಷೇತ್ರದಲ್ಲಿ ಸ್ಫರ್ಧಿಸಿದ್ದೆ. ಅದಕ್ಕೆ ಪಕ್ಷದ ಚನ್ನಪಟ್ಟಣ ಕಾರ್ಯಕರ್ತರೇ ಕಾರಣ. ಕಳೆದ ಇಪ್ಪತ್ತು ವರ್ಷಗಳಿಂದ ಇಲ್ಲಿನ ಕಾರ್ಯಕರ್ತರು ನೊಂದಿದ್ದರು. ಅವರ ಒತ್ತಡ ಮತ್ತು ನೋವಿಗೆ ಸ್ಪಂದಿಸುವ ಉದ್ದೇಶದಿಂದ ಎರಡು ಕಡೆ ಸ್ಪರ್ಧಿಸಬೇಕಾಯಿತು ಎಂದು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.