ಪ್ರತಿ ಲೀಟರ್ ನಂದಿನಿ ಹಾಲಿನ ದರವನ್ನು ಆಗಸ್ಟ್ 1ರಿಂದ ₹ 3 ಹೆಚ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿರುವುದನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಖಂಡಿಸಿದ್ದಾರೆ. ಸರ್ಕಾರ ಒಂದು ಕೈಯಲ್ಲಿ ಕೊಟ್ಟು, ಇನ್ನೊಂದು ಕೈಯಲ್ಲಿ ಕಸಿದುಕೊಳ್ಳುತ್ತಿದೆ. ಅನ್ನಭಾಗ್ಯದ ಹಣವನ್ನು ಹಾಲು, ಆಲ್ಕೋಹಾಲಿನಿಂದಲೇ ವಸೂಲಿಗೆ ಇಳಿದಿರುವ ಕಾಂಗ್ರೆಸ್ ಕ್ಷುದ್ರ ವಿತ್ತ ನೀತಿಗೆ ಧಿಕ್ಕಾರ ಎಂದು ಕಿಡಿಕಾರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.