ADVERTISEMENT

ಜೆಡಿಎಸ್‌ ಬಿಜೆಪಿಗೆ ಬೆಂಬಲ ನೀಡಲು ಮುಂದೆ ಬಂದರೆ ಸ್ವಾಗತವಿದೆ: ಶೆಟ್ಟರ್‌

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2020, 9:15 IST
Last Updated 6 ಡಿಸೆಂಬರ್ 2020, 9:15 IST
   

ಹುಬ್ಬಳ್ಳಿ: ‘ಕಾಂಗ್ರೆಸ್ ಗಾಂಧಿ ಕುಟುಂಬ ಬಿಟ್ಟು ಬೇರೆ ಯಾರನ್ನೂ ಬೆಳೆಸಿಲ್ಲ. ಕಾಂಗ್ರೆಸ್ ನಂಬಿ ಮೋಸ ಹೋಗಿರುವುದಾಗಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದು ಸರಿಯಾಗಿಯೇ ಇದೆ’ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಬಿಜೆಪಿ ಜೊತೆಗೆ ಇದ್ದರೆ ಅಧಿಕಾರದಲ್ಲಿ ಇರುತ್ತಿದ್ದರು. ಇದೀಗ ಪಶ್ಚಾತ್ತಾಪ ಪಡುತ್ತಿದ್ದಾರೆ’ಎಂದರು.

‘ಕಾಂಗ್ರೆಸ್ ವಿರುದ್ಧ ಹೋರಾಟ ನಡೆಸಿಯೇ ಇತರ ಪಕ್ಷಗಳು ಹುಟ್ಟಿಕೊಂಡಿವೆ. ಆರಂಭದಲ್ಲಿ ಅವರ ಜೊತೆ ಚೆನ್ನಾಗಿರುತ್ತಾರೆ. ನಂತರ ಅವರಿಂದ ಮೋಸ ಹೋಗಿ ಹೊರಗೆ ಬರುತ್ತಾರೆ’ಎಂದ ಶೆಟ್ಟರ್, ‘ಜೆಡಿಎಸ್ ಮತ್ತು ಬಿಜೆಪಿಯದ್ದು ಪ್ರಕೃತಿ ಸಹಜ ಸಂಬಂಧ. ಅವರು ನಮಗೆ ಬೆಂಬಲ ನೀಡಲು ಮುಂದೆ ಬಂದರೆ ಯಾವತ್ತೂ ಸ್ವಾಗತವಿದೆ’ಎಂದು ಪ್ರತಿಕ್ರಿಯಿಸಿದರು.

ADVERTISEMENT

‘ಸಭಾಪತಿ ಅವರನ್ನು ಕೆಳಗಿಳಿಸಲು ಜೆಡಿಎಸ್ ನಮ್ಮ ಜೊತೆಗೆ ಕೈಜೋಡಿಸಿದರೆ ಒಳ್ಳೆಯದು. ಅದರ ನಿರೀಕ್ಷೆಯಲ್ಲಿವಿದ್ದೇವೆ’ಎಂದು ಹೇಳಿದರು.

‘ಸಚಿವ ಸಂಪುಟ ವಿಸ್ತರಣೆ ವಿಚಾರ ವರಿಷ್ಠರಿಗೆ ಬಿಟ್ಟಿದ್ದು. ಅವರು ಯಾವಾಗ ಹೇಳುತ್ತಾರೋ ಆವಾಗ ಸಂಪುಟ ವಿಸ್ತರಣೆ ಆಗಲಿದೆ. ನಾನು ಬೆಳಗಾವಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ ಅನ್ನುವು ಕೇವಲ ಊಹಾಪೋಹ. ಅಲ್ಲಿ ಸ್ಪರ್ಧಿಸುವ ಅಭ್ಯರ್ಥಿ ಬಗ್ಗೆ ಈವರೆಗೆ ಎಲ್ಲಿಯೂ ಚರ್ಚೆಯಾಗಿಲ್ಲ’ಎಂದು ಸ್ಪಷ್ಟಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.