ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆಯಾಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಪ್ರಜ್ವಲ್ ರೇವಣ್ಣ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಕುರಿತು ಸುದ್ದಿಗಾರರಿಗೆ ಬೆಂಗಳೂರಿನಲ್ಲಿ ಭಾನುವಾರ ಪ್ರತಿಕ್ರಿಯಿಸಿದ ಅವರು, ʼಆರೋಪದ ಕುರಿತು ತನಿಖೆಗೆ ಮುಖ್ಯಮಂತ್ರಿಯವರು ವಿಶೇಷ ತನಿಖಾ ತಂಡರಚಿಸಿರುವುದು ಗಮನಕ್ಕೆ ಬಂದಿದೆ. ಎಸ್‌ಐಟಿ ತನಿಖೆ ಪೂರ್ಣಗೊಳ್ಳಲಿ. ಸತ್ಯಾಂಶ ಏನು ಎಂಬುದು ಹೊರಬರಲಿʼ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.