ADVERTISEMENT

ತೋಂಟದ ಶ್ರೀಗಳ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2018, 8:55 IST
Last Updated 21 ಅಕ್ಟೋಬರ್ 2018, 8:55 IST
   

ಗದಗ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ, ತೋಂಟದಾರ್ಯ ಮಠದ ಸಿದ್ದಲಿಂಗ ಸ್ವಾಮೀಜಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಮಠದ 20ನೇ ಪೀಠಾಧಿಪತಿಗಳಾಗಿ ನೇಮಕಗೊಂಡಿರುವ ನಾಗನೂರು ರುದ್ರಾಕ್ಷಿ ಮಠದ ಸಿದ್ದರಾಮ ಸ್ವಾಮೀಜಿ ಅವರನ್ನು ಅಭಿನಂದಿಸಿದರು.

ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಎಚ್.ಕೆ. ಪಾಟೀಲ, ಮಾಜಿ ಶಾಸಕ ಎನ್.ಎಚ್. ಕೋನರೆಡ್ಡಿ ಇದ್ದರು.

ADVERTISEMENT

ಮೆರವಣಿಗೆ ರದ್ದು: ತೋಂಟದ ಶ್ರೀಗಳ ಪಾರ್ಥಿವ ಶರೀರದ ಸಾರ್ವಜನಿಕ ಮೆರವಣಿಗೆ ರದ್ದುಪಡಿಸಲಾಗಿದೆ. ಮೃತದೇಹವು ಕ್ಷಯಿಸುತ್ತಿರುವ ಹಿನ್ನೆಲೆಯಲ್ಲಿ ಮಠದ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ. ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸುವ ಬದಲು,ಮಠದ ಆವರಣದಿಂದ ಪಾದಗಟ್ಟೆವರೆಗೆ ಮಾತ್ರ ಮೆರವಣಿಗೆ ನಡೆಯಲಿದ್ದು, ಭಕ್ತರು ಸಹಕಾರ ನೀಡಬೇಕು ಎಂದು ಮುಂಡರಗಿ ತೋಂಟದಾರ್ಯ ಶಾಖಾ ಮಠದ ಪೀಠಾಧಿಪತಿ ನಿಜಗುಣಾನಂದ ಸ್ವಾಮೀಜಿ ತಿಳಿಸಿದರು.

‘ತೋಂಟದಾರ್ಯ ಸ್ವಾಮೀಜಿ ನಾಡು, ನುಡಿಗೆ ಸಲ್ಲಿಸಿರುವ ಸೇವೆ ಪರಿಗಣಿಸಿ, ಗದುಗಿನ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯಕ್ಕೆ ಅವರ ಹೆಸರಿಡಬೇಕು’ ಎಂದು ಮಠದ ಭಕ್ತರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ‘ಸಂಪುಟ ಸಭೆಯಲ್ಲಿ ಇದನ್ನು ಚರ್ಚಿಸಿ ನಂತರ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಕುಮಾರಸ್ವಾಮಿಹೇಳಿದರು.

ಇವನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.