ADVERTISEMENT

News Express | ‘ಸಿಎಂ ಪುತ್ರನಿಗೆ ಸಾಂವಿಧಾನಿಕ ಹುದ್ದೆ: ಸದನದಲ್ಲಿ ಚರ್ಚೆ’

ಪ್ರಜಾವಾಣಿ ವಿಶೇಷ
Published 20 ನವೆಂಬರ್ 2023, 13:38 IST
Last Updated 20 ನವೆಂಬರ್ 2023, 13:38 IST

‘ಮುಖ್ಯಮಂತ್ರಿ ತಮ್ಮ ಪುತ್ರನಿಗೆ ಕಾನೂನು ಬಾಹಿರವಾಗಿ ಸಾಂವಿಧಾನಿಕ ಹುದ್ದೆ ನೀಡಿದ್ದು, ಈ ಬಗ್ಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸುತ್ತೇನೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಾಸನದಲ್ಲಿ ಸೋಮವಾರ ಮಾತನಾಡಿದ ಅವರು, ‘ಮುಖ್ಯಮಂತ್ರಿ ಪುತ್ರನಿಂದ ಅಧಿಕಾರಿಗಳ ವರ್ಗಾವಣೆ ಹೆಚ್ಚಾಗಿದೆ. ಅಧಿಕಾರಿಗಳನ್ನು ವರ್ಗಾವಣೆ ಮಾಡುವುದಾಗಿ ಹೆದರಿಸಿ ಹಣ ವಸೂಲಿ ಮಾಡಲಾಗುತ್ತದೆ’ ಎಂದು ಆರೋಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.