ಎಚ್.ಡಿ.ರಂಗನಾಥ್
(ಫೇಸ್‌ಬುಕ್ ಚಿತ್ರ)
ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಬೇಕು ಎನ್ನುವುದು ರಾಜ್ಯದ ಜನರ ಆಶಯ. ಈ ಕುರಿತು ಹೈಕಮಾಂಡ್ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕುಣಿಗಲ್ ಶಾಸಕ ಎಚ್.ಡಿ.ರಂಗನಾಥ್
ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಶಿವಕುಮಾರ್ ಅವರ ಆಡಳಿತ ವೈಖರಿ, ಅಭಿವೃದ್ಧಿ ದೃಷ್ಟಿಕೋನ, ಬೆಳಗಿನ ಜಾವ 3ರವರೆಗೂ ಮಾಡುವ ಜನಪರ ಕೆಲಸಗಳು ಅವರ ನಾಯಕತ್ವವನ್ನು ಸಾಬೀತು ಮಾಡಿವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 136 ಸ್ಥಾನ ಗೆಲ್ಲುವಲ್ಲಿ ಅವರ ಪರಿಶ್ರಮಿವಿದೆ. ಇಂದಲ್ಲ ನಾಳೆ ಅವರಿಗೆ ಮುಖ್ಯಮಂತ್ರಿ ಸ್ಥಾನ ಒಲಿಯಲಿದೆ’ ಎಂದರು.
ಮುಖ್ಯಮಂತ್ರಿ ಬದಲಾವಣೆ ವಿಷಯ ಕುರಿತು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ ಶಾಸಕ ಎಚ್.ಡಿ.ರಂಗನಾಥ್, ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಅವರಿಗೆ ಕೆಪಿಸಿಸಿ ಶಿಸ್ತುಪಾಲನಾ ನೋಟಿಸ್ ನೀಡಿದೆ.
‘ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಬಹಿರಂಗ ಹೇಳಿಕೆ ನೀಡದಂತೆ, ಪಕ್ಷಕ್ಕೆ ಮುಜುಗರವಾಗುವ ರೀತಿ ನಡೆದುಕೊಳ್ಳದಂತೆ ಎಐಸಿಸಿ ಸೂಚಿಸಿದ್ದರೂ ಇಬ್ಬರೂ ಮತ್ತೆ ಹೇಳಿಕೆ ನೀಡಿದ್ದು, ಪಕ್ಷದ ಶಿಸ್ತು ಉಲ್ಲಂಘಿಸಿ
ದ್ದೀರಿ. ಹೇಳಿಕೆಯನ್ನು ಪಕ್ಷ ಗಂಭೀರವಾಗಿ ಪರಿಗಣಿಸಿದ್ದು, ವಾರದ ಒಳಗೆ ನೋಟಿಸ್‌ಗೆ ಸಮಜಾಯಿಷಿ ನೀಡಬೇಕು’ ಶಿಸ್ತು ಪಾಲನಾ ಸಮಿತಿ ಅಧ್ಯಕ್ಷ ಕೆ.ರೆಹಮಾನ್ ಖಾನ್ ಸೂಚಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.