ಬೆಂಗಳೂರು: ಮೈತ್ರಿ ಪಕ್ಷಗಳ ಶಾಸಕರ ರಾಜೀನಾಮೆಯಿಂದ ಸರ್ಕಾರ ಅಲ್ಪಮತಕ್ಕೆ ಕುಸಿಯುತ್ತಿದ್ದು, ಅಧಿಕಾರ ಉಳಿಸಿಕೊಳ್ಳಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೆಣಗಾಡುತ್ತಿದ್ದರೆ, ಸಹೋದರ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಎಂಜಿನಿಯರುಗಳ ವರ್ಗಾವಣೆಯಲ್ಲಿ ತೊಡಗಿದ್ದಾರೆ.
ಸರ್ಕಾರದ ಅಸ್ತಿತ್ವದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದ ಸಚಿವರು, ತಮ್ಮ ಇಲಾಖೆಯ ಎಂಜಿನಿಯರುಗಳಿಗೆ ಬಡ್ತಿ ನೀಡುವುದು ಹಾಗೂ ವರ್ಗಾವಣೆಗೆ ಆದೇಶ ನೀಡುವಲ್ಲಿ ನಿರತರಾಗಿದ್ದಾರೆ.
ಜುಲೈ 6ರಿಂದ ಕಾಂಗ್ರೆಸ್, ಜೆಡಿಎಸ್ ಶಾಸಕರ ರಾಜೀನಾಮೆ ಪರ್ವ ಆರಂಭವಾಗಿದ್ದು, ಸರ್ಕಾರ ಅಲುಗಾಡುತ್ತಿದೆ. ಆದರೆ ರೇವಣ್ಣ ಮಾತ್ರ ಕಚೇರಿ ಕೆಲಸದಲ್ಲಿ ನಿರತರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.